ದೇವೇಗೌಡ 
ರಾಜ್ಯ

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೇವೇಗೌಡ ಕೆಂಡಾಮಂಡಲ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು,

ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ಕೆಟ್ಟ ಆಡಳಿತದ ವಿರುದ್ಧ ರಾಷ್ಟ್ರಪತಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ವರ್ಗಾವಣೆಯ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮಾಜಿ ಪ್ರಧಾನಿ ದೇವೇಗೌಡ, ರೋಹಿಣಿ ಸಿಂಧೂರಿ ಜಿಲ್ಲೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದ ದಕ್ಷ ಅಧಿಕಾರಿಯಾಗಿದ್ದಾರೆ. ಆದರೆ ’ಕಲೆಕ್ಷನ್’ ಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಿ ಅವರನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು ದೇವೇಗೌಡ ಆರೋಪ ಮಾಡಿದು, ರಾಜ್ಯ ಸರ್ಕಾರದ ನಡೆಯನ್ನು ವಿವರಿಸಿ, ಸರ್ಕಾರದ ಕೆಟ್ಟ ಆಡಳಿತದ ಬಗ್ಗೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ವಿವರಿಸುವುದಾಗಿ ತಿಳಿಸಿದ್ದಾರೆ. 
ಸಿಎಂ ಸಿದ್ದಾರಮಯ್ಯ ಸರ್ಕಾರವನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ದೇವೇಗೌಡ, ನಾನು ಮಾಜಿ ಪ್ರಧಾನಿ, ನನ್ನ ಕ್ಷೇತ್ರದಲ್ಲೆ ಈ ರೀತಿ ದಕ್ಷ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ ಎಂದಾದರೆ, ಇನ್ನು ಬೇರೆ ಪ್ರದೇಶಗಳಲ್ಲಿನ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: DCM ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ 5ಕ್ಕೆ ಪ್ರಮಾಣವಚನ ಸ್ವೀಕಾರ?

ಮಕ್ಕಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆ: 16 ವರ್ಷದೊಳಗಿನವರಿಗೆ "social media" ಬಳಕೆ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತನೆ..!

ಜ.28ರಿಂದಲೂ ವಿಚಾರಣೆ ನಡೆಸುತ್ತಿದ್ದರು, ರಾಯ್ ಸಾವಿಗೆ IT ಕಿರುಕುಳವೇ ಕಾರಣ: ಸಹೋದರ ಸಿಜೆ.ಬಾಬು ಗಂಭೀರ ಆರೋಪ

ಉದ್ಯಮಿ ರಾಯ್ ಆತ್ಮಹತ್ಯೆ: ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುವುದು ನಮ್ಮ ಸರ್ಕಾರದ ಕೆಲಸ; ಡಿ.ಕೆ. ಶಿವಕುಮಾರ್

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

SCROLL FOR NEXT