ಮಹಾಮಸ್ತಕಾಭಿಷೇಕಕ್ಕೆ ಶ್ರವಣಬೆಳಗೊಳ ಸಜ್ಜು 
ರಾಜ್ಯ

ಮಹಾಮಸ್ತಕಾಭಿಷೇಕಕ್ಕೆ ಶ್ರವಣಬೆಳಗೊಳ ಸಜ್ಜು: ಮಹಾಮಜ್ಜನ ನೇರಪ್ರಸಾರಕ್ಕೆ ಅವಕಾಶ

ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಬಾಹುಬಲಿಯ ಮಹಾಮಸ್ತಕಾಭಿಷೇಖ ಉತ್ಸವಕ್ಕೆ ಪವಿತ್ರ ಕ್ಷೇತ್ರ ಶ್ರವಣಬೆಳಗೊಳ ಸರ್ವ ರೀತಿಯಲ್ಲಿ ಸಿದ್ಧಗೊಳ್ಳುತ್ತಿದ್ದು, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಆ್ಯಪ್ ಮೂಲಕ ಮಹಾಮಜ್ಜನದ ನೇರಪ್ರಸಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ...

ಶ್ರವಣಬೆಳಗೊಳ: ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಬಾಹುಬಲಿಯ ಮಹಾಮಸ್ತಕಾಭಿಷೇಖ ಉತ್ಸವಕ್ಕೆ ಪವಿತ್ರ ಕ್ಷೇತ್ರ ಶ್ರವಣಬೆಳಗೊಳ ಸರ್ವ ರೀತಿಯಲ್ಲಿ ಸಿದ್ಧಗೊಳ್ಳುತ್ತಿದ್ದು, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಆ್ಯಪ್ ಮೂಲಕ ಮಹಾಮಜ್ಜನದ ನೇರಪ್ರಸಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. 
ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ ನೆಲೆಸಿರುವ ತ್ಯಾಗಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕ ಫೆಬ್ರವರಿ 7 ರಿಂದ 26ರವರೆಗೆ ನಡೆಯಲಿದೆ. ಜ.30ರ ವೇಳೆಗೆ ಸಕಲ ರೀತಿಯಲ್ಲಿ ಪವಿತ್ರ ಕ್ಷೇತ್ರ ಉತ್ಸವಕ್ಕೆ ಸಜ್ಜುಗೊಳ್ಳುತ್ತಿದೆ. 
ಅತ್ಯಾಧುನಿಕ ತಂತ್ರಜ್ಞಾನ ಮಾದರಿಯಲ್ಲಿ ಅಟ್ಟಣಿಗೆ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಫೆ.7ರಂದು ಮಹಾಮಸ್ತಕಾಭಿಷೇಕ ಕಾರ್ಯಕ್ರಮಗಳು ಉದ್ಘಾಟನೆಯಾಗಲಿದೆ. ಅಭಿಷೇಕ ಕೈಂಕರ್ಯಗಳು ಫೆ.17ರಿಂದ 25ರವರೆಗೆ 9 ದಿನಗಳ ಕಾಲ ನಡೆಯಲಿದ್ದು, ಫೆ.16ರವರೆಗೆ ಬೆಟ್ಟದ ಕೆಳಗೆ 10 ದಿನ ಪಂಚಕಲ್ಯಾಣ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಗಳು ಸೇರಿದಂತೆ ಇತರೆ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಫೆ.26 ರಂದು ಅಭಿಷೇಕದ ಸಮಾರೋಪ ನಡೆಯಲಿದೆ. 
ಮಹಾಮಸ್ತಕಾಭಿಷೇಕ ಫೆ.26ರಂದು ಪೂರ್ಣಗೊಗಂಡ ನಂತರವೂ ಸಾಮಾನ್ಯ ಜನರು ಅಭಿಷೇಕದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಆಗಸ್ಟ್ ವರೆಗೂ ಪ್ರತಿ ಭಾನುವಾರ ಮಹಾಮಸ್ತಕಾಭಿಷೇಕ ನಡೆಯಲಿದೆ. ಭಕ್ತರು ಆಗಸ್ಟ್ ವರೆಗೂ ಪ್ರತಿ ಭಾನುವಾರದಂದು ಅದ್ಭುತ ಕ್ಷಣಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಹಾಸನ ಉಸ್ತುವಾರಿ ಸಚಿವ ಹಾಗೂ ಸಮಿತಿಯ ಅದ್ಯಕ್ಷ ಎ. ಮಂಜು ಅವರು, ಈ ಜ.30ರೊಳಗೆ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಸೇವೆಗೆ ಲಭ್ಯವಾಗಲಿವೆ. ಶ್ರವಣಬೆಳಗೊಳದಲ್ಲಿ ಸ್ವಚ್ಛತೆ, ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಸ ಹಾಗೂ ಕೊಳಚೆ ನೀರು ಸಂಸ್ಕರಣಾ ಘಟಗಳನ್ನು ಸಹ ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 
ಮೂಲಭೂತ ಸೌರ್ಯ ಒದಗಿಸಲು ರೂ.175 ಕೋಟಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಜೊತೆಗೆ ಶ್ರವಣಬೆಳಗೊಳ ಸಂಪರ್ಕಿಸುವ ರಸ್ತೆಗಳನ್ನು ರೂ.89 ಕೋಟಿ ವೆಚ್ಚದಲ್ಲಿ ದುರಸ್ತಿಗೊಳಿಸಲಾಗಿದೆ. ಮಹಾಮಸ್ತಕಾಭಿಷೇಕಕ್ಕೆ ಹೆಚ್ಚುವರಿ ರೈಲು ಹಾಗೂ ಬಸ್ ಗಳ ಸೇವೆಯನ್ನು ಒದಗಿಸಲಾಗಿದೆ. 
ಅಂತರಾಷ್ಟ್ರೀಯ ಮಟ್ಟದಲ್ಲಿ ಈ ಮಹಾಮಸ್ತಕಾಭಿಷೇಕವನ್ನು ಬಿಂಬಿಸುವ ಕೆಲಸ ನಡೆದಿದೆ. ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ 400 ಮಂದಿ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಸುಮಾರು 30-35 ಲಕ್ಷ ಯಾತ್ರಿಕರು ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ