ಅಪಘಾತಕ್ಕಿಡಾದ ಕಾರು 
ರಾಜ್ಯ

ಹಾಸನದಲ್ಲಿ ಭೀಕರ ಅಪಘಾತ: ವಧು, ವರ ಸೇರಿ ಮೂವರು ಸಾವು

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮದುವೆಯಾಗಿ ದಂಪತಿಯಾಗಬೇಕಿದ್ದ....

ಹಾಸನ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮದುವೆಯಾಗಿ ದಂಪತಿಯಾಗಬೇಕಿದ್ದ ವಧು ಮತ್ತು ವರ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ತುಮಕೂರು ಜಿಲ್ಲೆಯ ವಧು ರಾಧಿಕಾ(25) ವರ ಸುಪ್ರೀತ್(27) ಮತ್ತು ಮಾನಸಿಕ ಅಸ್ವಸ್ಥ ಮಹಿಳೆ ರತ್ನಮ್ಮ (40) ಮೃತ ದುರ್ದೈವಿಗಳು. 
ಫೆಬ್ರವರಿ 5ರಂದು ರಾಧಿಕಾ ಮತ್ತು ಸುಪ್ರೀತ್ ಮದುವೆ ನಿಶ್ಚಯವಾಗಿತ್ತು. ಮದುವೆ ಹಿನ್ನೆಲೆಯಲ್ಲಿ ಮಂಜ್ರಾಬಾದ್ ಕೋಟೆ ಬಳಿ ವಿವಾಹ ಪೂರ್ವ ಫೋಟೋ ಶೂಟ್ ಮಾಡಿಕೊಂಡು ರಾಧಿಕಾ, ಸುಪ್ರೀತ್ ಮತ್ತು ರಾಧಿಕಾ ತಾಯಿ ವಾಪಸ್ ಕಾರಿನಲ್ಲಿ ಬರುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ಅಸ್ವಸ್ಥ ಮಹಿಳೆ ಕಾರಿಗೆ ಅಡ್ಡ ಬಂದಿದ್ದಾರೆ. ಆಕೆಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕ ಕಾರಿನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಿಂದ ಕಾರಿನಲ್ಲಿದ್ದ ಕ್ಯಾಮೆರಾಮನ್‍ಗೆ ಮತ್ತು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ರಾಧಿಕ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!