ಸಂಗ್ರಹ ಚಿತ್ರ 
ರಾಜ್ಯ

ಚುನಾವಣಾ ಆಯೋಗದ ಪತ್ರಕ್ಕೆ ಮಣಿದ ಸರ್ಕಾರ, ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಬ್ರೇಕ್!

ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಪತ್ರಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್ ಹಾಕಿದೆ.

ಬೆಂಗಳೂರು: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಪತ್ರಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್ ಹಾಕಿದೆ.
ಆಯೋಗದ ಪತ್ರದ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಮೂವರು ಜಿಲ್ಲಾಧಿಗಳ ವರ್ಗಾವಣೆಗೆ ರಾಜ್ಯ ಸರ್ಕಾರ ತಡೆ ನೀಡಿದ್ದು, ಈ ಮೂಲಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ವಿಚಾರದಲ್ಲಿ ಮಾಜಿ  ಪ್ರಧಾನಿ ದೇವೇಗೌಡರ ವಿರೋಧ, ಬಿಜೆಪಿ ಪ್ರತಿಭಟನೆಗಳಿಗೆ ಸರ್ಕಾರ ಮಣಿದಂತಾಗಿದೆ. 
ಇನ್ನು ಇದಕ್ಕೂ ಮೊದಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರು ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರಿಗೆ ಪತ್ರ ಬರೆದ ಬೆನ್ನಲ್ಲೇ, ರಾಜ್ಯ ಸರ್ಕಾರ ವರ್ಗಾವಣೆಗೆ ತಡೆ ನೀಡಿದೆ. ಅಂತೆಯೇ ಜಿಲ್ಲಾಧಿಕಾರಿಗಳ  ವರ್ಗಾವಣೆಗೆ ಸಮ್ಮತಿ ನೀಡುವಂತೆ ಕೋರಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಅವರೂ ಕೂ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದ್ದು, ಆಡಳಿತಾತ್ಮಕ ದೃಷ್ಟಿಕೋನದಿಂದ ವರ್ಗಾವಣೆ  ಅವಶ್ಯಕವಾಗಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದ ಆಯೋಗ, ವಿಶೇಷ ಪ್ರಕರಣಗಳಲ್ಲಿ ವರ್ಗಾವಣೆ ಮಾಡಬೇಕಾದರೆ ಆಯೋಗದ ಸಮ್ಮತಿ ಪಡೆಯಬೇಕು ಎಂದು ಹೇಳಿತ್ತು. ಈ ಪತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ  ಆಕ್ಷೇಪಣೆ ವ್ಯಕ್ತಪಡಿಸಿದ ಮಾತ್ರಕ್ಕೆ ರಾಜ್ಯ ಸರ್ಕಾರ ವರ್ಗಾವಣೆ ಆದೇಶ ಹಿಂತೆಗೆದುಕೊಳ್ಳಬೇಕು ಅಥವಾ ತಡೆಹಿಡಿಯಬೇಕು ಅಂತಿಲ್ಲ. ಇನ್ನೂ ಚುನಾವಣಾ ಅಧಿಸೂಚನೆ ಹೊರಬಿದ್ದಿಲ್ಲ. ಆದರೂ ಆಯೋಗದೊಂದಿಗೆ ಸಂಘರ್ಷಕ್ಕೆ  ಇಳಿಯುವುದು ಬೇಡ ಎಂಬ ಕಾರಣಕ್ಕೆ  ನಿಯಮಾವಳಿ ಪ್ರಕಾರವೇ ಪತ್ರ ಬರೆದು ವರ್ಗಾವಣೆಗೆ ಅನುಮತಿ ಕೋರಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇನ್ನು ಈ ಬಗ್ಗೆ ಮಾತನಾಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು, ಪ್ರಸ್ತುತ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ತಡೆ ನೀಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT