ರಾಜ್ಯ

ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ, ಲೈಸೆನ್ಸ್ ರದ್ದು

Nagaraja AB

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘಿಸುವವರ ಪ್ರಕರಣ ಹೆಚ್ಚಾಗುತ್ತಿದ್ದು, ಅಂತಹವರ ಲೈಸೆನ್ಸ್ ರದ್ದುಗೊಳಿಸಲು ಸಾರಿಗೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಹಲವು ಪ್ರಕರಣಗಳಲ್ಲಿ ಚಾಲಕರೇ ಹೆಚ್ಚಾಗಿ ನಿಯಮ ಉಲ್ಲಂಘಿಸುತ್ತಿದ್ದಾರೆ. ಆದರೆ, ಆ ವಾಹನದ ಮಾಲೀಕರು ಬೇರೆಯಾಗಿರುತ್ತಾರೆ. ಲೈಸೆನ್ಸ್ ಮಾಲೀಕರ ವಿರುದ್ಧವೇ ಪೊಲೀಸರು ದೂರು ದಾಖಲಿಸಿದ್ದು, ಲೈಸೆನ್ಸ್ ರದ್ದುಪಡಿಸುವಂತೆ ಶಿಫಾರಸ್ಸು ಮಾಡಿದ್ದಾರೆ. ವಾಹನಗಳು ಸುರಕ್ಷಿತವಾಗಿ ಚಾಲನೆ ಮಾಡದಿದ್ದಲ್ಲಿ, ಸನ್ ಗ್ಲಾಸ್ ಅಳವಡಿಸದಿದ್ದರೆ ಆ ವಾಹನದ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗುತ್ತಾರೆ ಎಂದು ಸಾರಿಗೆ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಡಟಾ ಬೇಸ್  ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಕೆಲ ವಾರಗಳಲ್ಲೇ ಪೂರ್ಣಗೊಳ್ಳಲಿದೆ. ಇದರಿಂದ ಪೊಲೀಸ್ ಸಿಬ್ಬಂದಿಯೊಂದಿಗೆ ಮಾಹಿತಿ ಹಂಚಿಕೊಳ್ಳಲು ಸಾರಾಗವಾಗಲಿದ್ದು, ಅಮಾನತು ಪ್ರಕ್ರಿಯೆಯನ್ನು ಸುಲಭವಾಗಿ ಮಾಡಬಹುದಾಗಿದೆ.
ಪದೇ ಪದೇ ನಿಯಮ ಉಲ್ಲಂಘಿಸುವವರು, ಕುಡಿದು ಚಾಲನೆ ಮಾಡುವವರನ್ನು ಪತ್ತೆಹಚ್ಚಿ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

SCROLL FOR NEXT