ರಾಜ್ಯ

ವೀರಶೈವ ಮಹಾಸಭಾ ಇಬ್ಭಾಗವಾಗಿ ಲಿಂಗಾಯತ ಮಹಾಸಭಾ ಉದಯ

Sumana Upadhyaya
ಬೆಂಗಳೂರು: ವೀರಶೈವ ಮತ್ತು ಲಿಂಗಾಯತ ಸಮುದಾಯಗಳಿಗೆ ಪ್ರತ್ಯೇಕ ಧಾರ್ಮಿಕ ಸ್ಥಾನಮಾನ ನೀಡಬೇಕೆಂಬ ಹಲವು ದಿನಗಳ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. 
ಅಖಿಲ ಭಾರತ ವೀರಶೈವ ಮಹಾ ಸಭಾಕ್ಕೆ ಬದಲಾಗಿ ಜಾಗತಿಕ ಮಟ್ಟದಲ್ಲಿ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದೆ. ಈ ಮೂಲಕ ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿದ್ದ ವೀರಶೈವ -ಲಿಂಗಾಯತ ಸಮುದಾಯದ ಮಹಾಸಭಾ ಇಬ್ಭಾಗವಾದಂತಾಗಿದೆ.
ಪ್ರತ್ಯೇಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವೀರಶೈವ ಮಹಾಸಭಾದ ಪ್ರಾಥಮಿಕ ಸದಸ್ಯತ್ವಕ್ಕೆ  ವಿಧಾನ ಪರಿಷತ್‌ನ ಹಿರಿಯ ಸದಸ್ಯ ಬಸವರಾಜ್‌ ಹೊರಟ್ಟಿ ಸಹಿತ ದಾವಣಗೆರೆ, ಧಾರವಾಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ 400ಕ್ಕೂ ಹೆಚ್ಚು ಸದಸ್ಯರು ರಾಜೀನಾಮೆ ಸಲ್ಲಿಸಿ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿಕೊಂಡರು.
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಿನ್ನೆ ನಡೆದ ಲಿಂಗಾಯತ ಮುಖಂಡರು ಮತ್ತು ಸ್ವಾಮೀಜಿಗಳ ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ರಚನೆಗೆ ತೀರ್ಮಾನ ಕೈಗೊಳ್ಳಲಾಯಿತು.ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಡುತ್ತಿರುವ ಹಿರಿಯ ಮುಖಂಡ ಬಸವರಾಜ್‌ ಹೊರಟ್ಟಿ  ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ, ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಕಾರ್ಯಾಧ್ಯಕ್ಷರಾಗಿ ಮತ್ತು  ವೈದ್ಯ ಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ್‌ ಪಾಟೀಲ್‌ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು.
ಪ್ರತ್ಯೇಕ ಧಾರ್ಮಿಕ ಸ್ಥಾನಮಾನಕ್ಕಾಗಿ ಇಷ್ಟು ದಿನ ಉತ್ತರ ಕರ್ನಾಟಕ ಭಾಗಗಳಲ್ಲಿ ನಡೆಯುತ್ತಿದ್ದ ಹೋರಾಟ ಇನ್ನು ಮುಂದೆ ದಕ್ಷಿಣ ಕರ್ನಾಟಕ ಭಾಗಗಳಿಗೂ ವಿಸ್ತರಣೆಯಾಗಲಿದೆ.
SCROLL FOR NEXT