ರಾಮನಗರ: ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ, 
ರಾಜ್ಯ

ರಾಮನಗರ: ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ, ಜಿಲ್ಲಾ ನ್ಯಾಯಾಲಯದಿಂದ ಐತಿಹಾಸಿಕ ತೀರ್ಪು

ಒಂಭತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗೆ ರಾಮನಗರ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡೀದೆ.

ರಾಮನಗರ: ಒಂಭತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗೆ ರಾಮನಗರ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡೀದೆ. 
ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗಲ್ಲು ಶಿಕ್ಷೆ ತೀರ್ಪು ಪ್ರಕಟವಾಗಿದ್ದು ಅತ್ಯಾಚಾರ, ಕೊಲೆ ಆರೋಪಿ ಸಲೀಂ ಎನ್ನುವಾತನಿಗೆ ರಾಮನಗರ ಜಿಲ್ಲಾ  3ನೇ ಸತ್ರ ನ್ಯಾಯಾಧೀಶ  ಗೋಪಾಲಕೃಷ್ಣ ರೈಗಲ್ಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ.
2012ರ ಆಗಸ್ಟ್ ಹದಿನೈದರಂದು  ಆರೋಪಿ ಸಲೀಂ ತಾವರೆಕರೆಯಲ್ಲಿ  ಹೀನಾ ಕೌಸರ್‌ (9) ಎನ್ನುವವಳ ಮೇಲೆ ಅತ್ಯಾಚಾರ ಮಾಡಿ ಹತ್ಯೆ ನಡೆಸಿದ್ದ. ಈ ಪ್ರಕರಣ ಸಂಬಂಧ 23ಕ್ಕೂ ಹೆಚ್ಚು ಸಾಕ್ಷಿಗಳು ಆರೋಪಿ ಸಲೀಂ ವಿರುದ್ಧ ಸಾಕ್ಷಿ ಹೇಳಿದ್ದು ಎಫ್‌ಎಸ್‌ಎಲ್‌ ವರದಿ ಸಹ ಇದನ್ನೇ ಸಾರಿ ಹೇಳಿತ್ತು. 
ಇಂದು ತೀರ್ಪು ಪ್ರಕಟಿಸಿದ ನ್ಯಾಯಾಧೀಶರು ಆರೋಪಿಗೆ ಅತ್ಯಾಚಾರಕ್ಕೆ 10 ವರ್ಷ ಸೆರೆವಾಸ, 50 ಸಾವಿರ ದಂಡ ಶಿಕ್ಷೆ ವಿಧಿಸಿದ್ದರೆ ಕೊಲೆಗಾಗಿ ಗಲ್ಲು ಶಿಕ್ಷೆ ಜಾರಿ ಮಾಡುವಂತೆ ಆದೇಶಿಸಿದ್ದಾರೆ.
ತೀರ್ಪಿನ ಬಳಿಕ ನ್ಯಾಯಾಲಯದಿಂದ ಹೊರಬಂದ ಸಲೀಂ ಆಕ್ರೋಶಗೊಂಡಿದ್ದು ಮಾದ್ಯಮ ಸಿಬ್ಬಂದಿ ಹಾಗು ವಕೀಲರ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್