ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರ ಇಬ್ಬರು ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸಮ್ಮತಿ ಕೋರಿ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಎಆರ್) ಚುನಾವಣಾ ಆಯೋಗಕ್ಕೆ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಅನುಮೋದನೆ ನೀಡುವಂತೆ ಕೋರಿ ಪತ್ರ ಬರೆದಿದೆ.
ಕರ್ನಾಟಕ ಚುನಾವಣಾ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವರ್ಗಾವಣೆ ಕುರಿತಂತೆ ಸಮ್ಮತಿಗಾಗಿ ಪತ್ರ ಬರೆದಿದೆ. ಪತ್ರದಲ್ಲಿ ನಮಗೆ ಸಂಪೂರ್ಣ ಮಾಹಿತಿ ಸಿಕ್ಕಿಲ್ಲ. ವರ್ಗಾವಣೆಯ ಆದೇಶವನ್ನು ಅನುಮೋದಿಸಲು ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಸೂಕ್ತ ಕಾರಣಗಳು ನೀಡಿಲ್ಲ ಎಂದು ಅವರು ಹೇಳಿದ್ದಾರೆ.
ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಬರೆದಿರುವ ಪತ್ರದಲ್ಲಿ ಕೇವಲ ಒಂದು ಪುಟ ಮಾತ್ರವಿದ್ದು ವರ್ಗಾವಣೆಗೆ ನಿಖರವಾದ ಕಾರಣಗಳನ್ನು ಸ್ಪಷ್ಟಪಡಿಸಿಲ್ಲ. ಹೀಗಾಗಿ ಸದ್ಯ ಪತ್ರವನ್ನು ಸ್ವೀಕರಿಸಲಾಗಿದ್ದು ಈ ಕುರಿತು ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಚುನಾವಣಾ ಆಯೋಗದ ಮುಖ್ಯಸ್ಥರು ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಡೆಗಣಿಸಲಾಗಿದೆ?
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲೇ ನಡೆಯುವುದರಿಂದ ಮತದಾರರ ಪಟ್ಟಿ ಸೇರ್ಪಡೆಯ ಅಂತಿಮ ದಿನದವರೆಗೆ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡದಂತೆ ಚುನಾವಣಾ ಆಯೋಗ ಈ ಮೊದಲೇ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೂ, ರೋಹಿಣಿ ಸಿಂಧೂರಿ ಸೇರಿ 7 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಡೆಗಣಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics