ಬೆಳ್ಳಂದೂರು ಕೆರೆ ಮಾಲಿನ್ಯ: ಸಮಸ್ಯೆ ಬಗೆಹರಿಸುವ ಯೋಜನೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಎನ್ ಜಿಟಿ ಸೂಚನೆ
ಬೆಳಂದೂರು ಕೆರೆ ಸಮಸ್ಯೆ ಬಗೆಹರಿಸಲು ಕೈಗೊಂಡಿರುವ ಯೋಜನೆಯನ್ನು ತನ್ನ ಮುಂದೆ ಮಂಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಬೆಂಗಳೂರು: ಬೆಳ್ಳಂದೂರು ಕೆರೆ ಸಮಸ್ಯೆ ಬಗೆಹರಿಸಲು ಕೈಗೊಂಡಿರುವ ಯೋಜನೆಯನ್ನು ತನ್ನ ಮುಂದೆ ಮಂಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೆರೆ ಸ್ವಚ್ಛತೆ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಮೇಲ್ದರ್ಜೇಗೇರಿಸುವಿಕೆ, ಒಳಚರಂಡಿ ನೀರು ಕೆರೆ ಸೇರುವುದು ತಡೆಯುವಿಕೆ ಮತ್ತಿತರ ಸಂಬಂಧ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಜ.29ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಎನ್ ಜಿಟಿ ಸೂಚಿಸಿದೆ ಎಂದು ಶರಣ್ಸ್ ಜೈನ್ ಸಂಸ್ಥೆ ಪರ ವಕೀಲರು ತಿಳಿಸಿದ್ದಾರೆ.
ಮಾಲಿನ್ಯದಿಂದ ಬೆಂಕಿ ಹೊತ್ತಿಕೊಳ್ಳುತ್ತಿಲ್ಲ , ಕೆಲ ದುಷ್ಕರ್ಮಿಗಳು ಬೆಂಕಿ ಹೊತ್ತಿಸುತ್ತಿದ್ದಾರೆ ಎಂದು ರಾಜ್ಯಸರ್ಕಾರ ಪರ ವಕೀಲರು ವಾದಿಸಿದ್ದಾರೆ . ಕಳೆದ ವಾರ ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ತಗ್ಗಿಸುವಂತೆ ಎನ್ ಬಿಎಫ್ ಸಂಸ್ಥೆ ಸಿಇಓ ಶ್ರೀಧರ್ ಪಬ್ಬಿಶೆಟ್ಟಿಹಸಿರು ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.
ವೈಜ್ಞಾನಿಕ ವಿಧಾನಗಳ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ, ಸರ್ಕಾರ ವಿಳಂಬ ಧೋರಣೆ ಕೈ ಬಿಟ್ಟು, ತಜ್ಞರ ಸಮಿತಿ ವರದಿ ಆಧಾರದ ಮೇಲೆ ಕ್ರಮ ಕೈಗೊಂಡು ಬೆಳಂದೂರು ಕೆರೆಗೆ ಪುನರ್ ಜೀವನ ನೀಡಬೇಕಾಗಿದೆ ಎಂದು ಶ್ರೀಧರ್ ಪಬ್ಬಿಶೆಟ್ಟಿ ಒತ್ತಾಯಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.