ಅಲ್ಪಸಂಖ್ಯಾತರ ವಿರುದ್ಧದ ಕೋಮುಗಲಭೆ ಪ್ರಕರಣ ವಾಪಸ್ ಪಡೆಯಲು ಸರ್ಕಾರದ ನಿರ್ಧಾರ: ವಿವಾದಕ್ಕೀಡಾದ ನಡೆ
ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಕೋಮುಗಲಭೆ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಡೆ ವಿವಾದಕ್ಕೀಡಾಗಿದೆ.
ಬೆಂಗಳೂರು: ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಕೋಮುಗಲಭೆ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯ ಸರ್ಕಾರದ ನಡೆ ವಿವಾದಕ್ಕೀಡಾಗಿದೆ.
2017 ರ ಡಿಸೆಂಬರ್ 22 ರಂದು ಹಾಗೂ 2018 ರ ಜನವರಿ 02 ರಂದು ಕರ್ನಾಟಕ ಡಿಜಿಪಿ ಮಂಗಳೂರು, ಬೆಳಗಾವಿ ಹಾಗೂ ವಿವಿಧ ಜಿಲ್ಲೆಗಳ ಇನ್ನೂ 21 ಎಸ್ ಪಿ ಗಳಿಗೆ ಬರೆದಿರುವ ಪತ್ರದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಇರುವ ಕೋಮು ಗಲಭೆ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಸೂಚನೆ ನೀಡಿದ್ದಾರೆ.
"ಮುಗ್ಧ ಅಲ್ಪಸಂಖ್ಯಾತರ ವಿರುದ್ಧ ಇರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಪತ್ರದಲ್ಲಿ ಸೂಚಿಸಲಾಗಿದ್ದು, ಕಳೆದ 5 ವರ್ಷಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ನಡೆಗೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಬಹುಸಂಖ್ಯಾತರಲ್ಲಿ ಅಭದ್ರತೆ ಮೂಡಿಸುವಂತಹ ನಿರ್ಧಾರವಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.