ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಪದ್ಮಾವತ್ ಚಿತ್ರ ಪ್ರದರ್ಶನದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ವಿವಾದಿತ ಪದ್ಮಾವತ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಸಂದರ್ಭದಲ್ಲಿ ಬೆಳಗಾವಿಯ ಪ್ರಕಾಶ್ ಚಿತ್ರಮಂದಿರದ ಆವರಣದಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ...

ಬೆಳಗಾವಿ: ವಿವಾದಿತ ಪದ್ಮಾವತ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಸಂದರ್ಭದಲ್ಲಿ ಬೆಳಗಾವಿಯ ಪ್ರಕಾಶ್ ಚಿತ್ರಮಂದಿರದ ಆವರಣದಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. 
ದ್ವಿಚಕ್ರ ವಾಹನದಲ್ಲಿ ಬಂದಿರುವ 4-5 ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದು, ಪಟಾಕಿ ಸಿಡಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪೆಟ್ರೋಲ್ ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆಯೇ ಶಬ್ಧದಿಂದ ಬೆಚ್ಚಿಬಿದ್ದ ಚಲನಚಿತ್ರ ಮಂದಿರದ ಒಳಗಿದ್ದ ಪ್ರೇಕ್ಷಕರು ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 
ಪೆಟ್ರೋಲ್ ಬಾಂಬ್ ಸ್ಫೋಟಗೊಂಡ ಪರಿಣಾಮ ಅಕ್ಕಪಕ್ಕದವರು ಕೂಡ ಭಯಭೀತರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT