ಬೀದರ್: ತನ್ನ ಪ್ರೀತಿ ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಯುವತಿಯನ್ನು ಎಳೆದೊಯ್ದ ದುಷ್ಕರ್ಮಿಯೋರ್ವ ಆಕೆಯ ಮೇಲೆ ಬಲಾತ್ಕಾರ ಮಾಡಿ ಬಳಿಕ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ನ ಬಾಲ್ಕಿ ತಾಲೂಕಿನ ಕೋಸಮ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಪೂಜಾ ಎಂಬ ವಿದ್ಯಾರ್ಥಿನಿ ಕೊಲೆಯಾದ ಯುವತಿಯಾಗಿದ್ದಾಳೆ. ಇನ್ನು ಪ್ರಕರಣ ಸಂಬಂಧ ಬಾಲ್ಕಿ ಪೊಲೀಸರು 24 ವರ್ಷದ ಆರೋಪಿ ಶಂಸುದ್ದೀನ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ ಆರೋಪಿ ಶಂಸುದ್ದೀನ್, ಕಳೆದ ಎರಡು ವರ್ಷಗಳಿಂದ ಪೂಜಾಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನಂತೆ. ನಿನ್ನೆಯೂ ಈ ಬಗ್ಗೆ ಪೂಜಾಳ ಬಳಿ ಪ್ರಸ್ತಾಪ ಮಾಡಿ ಆಕೆ ಒಪ್ಪದಿದ್ದಾಗ ಆಕೆಯನ್ನು ಬಲವಂತವಾಗಿ ಖಾನಾಪುರ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಅರಣ್ಯದಲ್ಲಿ ಯುವತಿಯ ಮೃತದೇಹ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪೂಜಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿ ಶಂಸುದ್ದೀನ್ ನನ್ನು ಬಂಧಿಸಿದ್ದು, ಪ್ರಕರಣದ ವಿಚಾರಣೆ ಮುಂದುವರೆಸಿದ್ದಾರೆ. ಇನ್ನು ಮಗಳನ್ನು ಕಳೆದುಕೊಂಡ ಪೂಜಾಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ನಿನ್ನೆ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಈಶ್ವರ್ ಖಂಡ್ರೆ ಹತ್ಯೆಗೀಡಾದ ಯುವತಿಯ ಪೋಷಕರಿಗೆ ಸಾಂತ್ವನ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics