ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ ಮತ್ತು ಕವಿ ಕನಕದಾಸರ ಪುತ್ಹಳಿಯನ್ನು ವಿಧಾನಸೌಧದ ಆವರಣದಲ್ಲೇ ಸ್ಥಾಪನೆ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ತಲಾ 2 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆ. ಸಿ ರೆಡ್ಡಿ ಹಾಗೂ ಕನಕದಾಸರ ಪುತ್ಹಳಿ ನಿರ್ಮಾಣಕ್ಕೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ.
ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿದ್ದ ಚಂಗಲ್ ರಾಯರೆಡ್ಡಿ,
ವಿಧಾನಸೌಧದ ನೀಲಿನಕ್ಷೆ ರೂಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಇವರ ಆಳ್ವಿಕೆಯ ಕಾಲದಲ್ಲಿ ಮಾಜಿ ಪ್ರಧಾನಮಂತ್ರಿ ಜವಹರಲಾಲ್ ನೆಹರೂ ಅವರನ್ನು ಬೆಂಗಳೂರಿಗೆ ಕರೆಯಿಸಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.
ವಿಧಾನಸೌಧದ ಆಸೆಂಬ್ಲಿ ಹಾಲ್ ನ ಒಳಗಡೆ ಪುತ್ಹಳಿ ಸ್ಥಾಪಿಸಬೇಕೆಂದು ಹಲವು ದಿನಗಳ ಬೇಡಿಕೆಯಾಗಿದ್ದು, ವಿಧಾನಸೌಧದ ಪಶ್ಟಿಮ ಧ್ವಾರದಲ್ಲೇ ಪುತ್ಹಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನಸಭಾಧ್ಯ ಕೆ. ಬಿ. ಕೋಳಿವಾಡ್ ತಿಳಿಸಿದ್ದಾರೆ.
ಮಾರ್ಚ್ ತಿಂಗಳೊಳಗೆ ಪುತ್ಹಳಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಆದರೆ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.