ಪ್ರಧಾನಿ ನರೇಂದ್ರಮೋದಿ ಸಮಾವೇಶ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಶ್ವಾನದಳ ಪರಿಶೀಲನೆ ನಡೆಸುತ್ತಿರುವ ಚಿತ್ರ 
ರಾಜ್ಯ

ಬೆಂಗಳೂರು ಬಂದ್ ಹೊರತಾಗಿಯೂ ಪ್ರಧಾನಿ ಮೋದಿ ಭೇಟಿ ಯಶಸ್ವಿಗೊಳಿಸಲು ರಾಜ್ಯ ಬಿಜೆಪಿ ಸಿದ್ಧತೆ

ಫೆ. 4 ರಂದು ಪ್ರಧಾನಮಂತ್ರಿ ನರೇಂದ್ರಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು,ಅರಮನೆ ಮೈದಾನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅಂದು ಬಂದ್ ಹೊರತಾಗಿಯೂ ಪ್ರಧಾನಿ ಮೋದಿ ಭೇಟಿ ಯಶಸ್ವಿಗೊಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಬೆಂಗಳೂರು :  ಫೆ. 4 ರಂದು ಪ್ರಧಾನಮಂತ್ರಿ ನರೇಂದ್ರಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು,ಅರಮನೆ ಮೈದಾನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಆದರೆ, ಮಹದಾಯಿ ನದಿ ವಿವಾದ ಸಂಬಂಧ ಪ್ರಧಾನಿ ನರೇಂದ್ರಮೋದಿ  ಗಮನ ಸೆಳೆಯಲು ಅಂದು ವಿವಿಧ ಕನ್ನಡ ಹಾಗೂ ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬಂದ್ ಹೊರತಾಗಿಯೂ ಪ್ರಧಾನಿ ಮೋದಿ ಭೇಟಿ ಯಶಸ್ವಿಗೊಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಯಿಂದ ಸುಮಾರು 3 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ, ಎನ್, ರವಿಕುಮಾರ್, ಖಜಾಂಚಿ ಸುಬ್ಬಾ ನರಸಿಂಹ ಅವರನ್ನೊಳಗೊಂಡ 10 ಸದಸ್ಯರ ಸಮನ್ವಯ ಸಮಿತಿ ರಚಿಸಲಾಗಿದೆ

ರಾಜ್ಯರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳು  ರಸ್ತೆಗಿಳಿಯುವ ಸಾಧ್ಯತೆ ಕಡಿಮೆ ಇದ್ದು, ಪಕ್ಷದ ಕಾರ್ಯಕರ್ತರನ್ನು ಕರೆತರಲು ಖಾಸಗಿ ಬಸ್ಸುಗಳನ್ನು ಮುಂಗಡವಾಗಿ  ಕಾಯ್ದಿರಿಸಲಾಗಿದೆ.ಸಮಾವೇಶಕ್ಕಾಗಿ ಆಗಮಿಸುವ ಜನರಿಗೆ ಉಚಿತ ಸಾರಿಗೆ, ಊಟದ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ವಕ್ತಾರ ಅಶ್ವತ್ ನಾರಾಯಣ್ ತಿಳಿಸಿದ್ದಾರೆ.

ಅಂದಿನ ಸಮಾವೇಶಕ್ಕೆ ಸಹಸ್ರಾರು ಜನರು ಆಗಮಿಸುವ ನಿರೀಕ್ಷೆಯಿದ್ದು, ಬೆಂಗಳೂರು ನಗರಕ್ಕೆ ಸಮೀಪದಲ್ಲಿರುವ ಕನಕಪುರ, ನೆಲಮಂಗಲ, ಮತ್ತಿತರ ಕಡೆಗಳಲ್ಲಿ ಸಮುದಾಯ ಭವನ, ಶಾಲಾ, ಕಾಲೇಜುಗಳ ಬಳಿ ಸಮಾವೇಶಕ್ಕೂ ಮುನ್ನ ಸ್ವಲ್ಪ ಹೊತ್ತು ತಂಗಲು ವ್ಯವಸ್ಥೆ ಮಾಡಲಾಗಿದೆ.

 ಬೃಹತ್ ಬೈಕ್, ಟಾರ್ಟ್ ಲೈಟ್ ಮೆರವಣಿಗೆ ಆಯೋಜಿಸಲಾಗಿದ್ದು,  ಕೆಲ ದಿನಗಳ ಹಿಂದೆ ತಾಲೂಕು ಮಟ್ಟದಲ್ಲಿ ಈ ಸಂಬಂಧಿತ ಕರಪತ್ರವನ್ನು ಹಂಚಲಾಗಿದೆ . ಸಮಾವೇಶ ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ ವಿಭಾಗ ಕೂಡಾ ಕಾರ್ಯನಿರ್ವಹಿಸುತ್ತಿದೆ ಎಂದು ಅಶ್ವತ್ ನಾರಾಯಣ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT