ಬೆಳ್ಳಂದೂರು ಕೆರೆಯ (ಸಾಂದರ್ಭಿಕ ಚಿತ್ರ) 
ರಾಜ್ಯ

ಬೆಳ್ಳಂದೂರು ಕೆರೆ ಬಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸುವಂತೆ ಎನ್ ಜಿಟಿ ನಿರ್ದೇಶನ

ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ 99 ಅಪಾರ್ಟ್ ಮೆಂಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿದೆ.

ಬೆಂಗಳೂರು: ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಿಗೆ  ತ್ಯಾಜ್ಯ ನೀರು ಬಿಡುವ
 99 ಅಪಾರ್ಟ್ ಮೆಂಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿದೆ.

ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಎನ್ ಜಿಟಿ, ಕೆರೆಯ ಸ್ವರೂಪಕ್ಕೆ ಧಕ್ಕೆ ಬಾರದ ರೀತಿಯಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸುವಂತೆಯೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಆದೇಶಿಸಿದೆ.

 ಕೈಗಾರಿಕೆಗಳು ತ್ಯಾಜ್ಯ ನೀರು ಹೊರಹಾಕದಂತೆ ಮುಂಜಾಗ್ರತೆ ವಹಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದೆ. ಕೆರೆಯಲ್ಲಿನ ತ್ಯಾಜ್ಯವೇ  ಬೆಂಕಿಗೆ ಕಾರಣ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಇವುಗಳನ್ನು ತೆಗೆಯುವಂತೆ ರಾಜ್ಯಸರ್ಕಾರಕ್ಕೆ ಆದೇಶಿಸಿದೆ. ಈ ಸಂಬಂಧ ಸಮಗ್ರ ವರದಿಯನ್ನು ಪ್ರತಿ ತಿಂಗಳು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

 ಕೆರೆಯಲ್ಲಿನ ಬೆಂಕಿಗೆ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಸಂಬಂಧ ಅಧ್ಯಯನ ನಡೆಸುವಂತೆ ಭಾರತೀಯ ವಿಜ್ಞಾನ ಸಂಸ್ಥೆಗೆ ನ್ಯಾಯಾಧೀಕರಣ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!