ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಲು ನೂತನವಾಗಿ ನೇಮಕಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರು ಬುಧವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಚುನಾವಣಾ ಸಮಿತಿಯ ಹಿರಿಯ ಅಧಿಕಾರಿ, ಅಧಿಕಾರಿಗಳ ತಂಡದೊಂದಿಗೆ ಚುನಾವಣಾ ಮುಖ್ಯ ಆಯುಕ್ತರೂ ಕೂಡ ಬೆಂಗಳೂರಿಗೆ ಭೇಟಿ ನೀಡಿ ಚುನಾವಣಾ ಸಮಿತಿ, ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತುಕದತೆ ನಡೆಸಿ, ಚುನಾವಣಾ ಸಿದ್ಧತೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆಂದು ಹೇಳಿದ್ದಾರೆ.
ಎಂದಿನಂತೆ ಸಾಮಾನ್ಯ ಪ್ರಕ್ರಿಯೆಗಳಂತೆ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಚುನಾವಣೆಗೆ ಇನ್ನು 2-3 ತಿಂಗಳು ಬಾಕಿಯಿರುವ ಹಿನ್ನಲೆಯಲ್ಲಿ ಚುನಾವಣಾ ಸಿದ್ಧತೆ ಕುರಿತಂತೆ ಪರಿಶೀಲನೆ ನಡೆಸಲು ಭೇಟಿ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.