ಮೈಸೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಆಂದೋಲನ ವೃತ್ತದ ಬಳಿ ರಿಂಗ್ ರಸ್ತೆಯಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.