ಮಾತುಕತೆಗೆ ತಮಿಳುನಾಡು ಸಿಎಂ ಸ್ವಾಗತಿಸುತ್ತೇವೆ, ಆದರೆ, ಕಾವೇರಿ ನೀರು ಬಿಡಲ್ಲ: ಸಚಿವ ಪಾಟೀಲ್
ರಾಜ್ಯಕ್ಕೆ ಆಗಮಿಸುವ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿಯವರನ್ನು ಸ್ವಾಗತಿಸುತ್ತೇವೆ. ಆದರೆ, ತಮಿಳುನಾಡಿಗೆ ಮಾತ್ರ ಕಾವೇರಿ ನೀರು ಬಿಡಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಬುಧವಾರ ಹೇಳಿದ್ದಾರೆ...
ಬೆಂಗಳೂರು: ರಾಜ್ಯಕ್ಕೆ ಆಗಮಿಸುವ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿಯವರನ್ನು ಸ್ವಾಗತಿಸುತ್ತೇವೆ. ಆದರೆ, ತಮಿಳುನಾಡಿಗೆ ಮಾತ್ರ ಕಾವೇರಿ ನೀರು ಬಿಡಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿಯೇ ನೀರಿಗೆ ಸಂಕಷ್ಟದ ಪರಿಸ್ಥಿತಿ ಇರುವುದರಿಂದ ಯಾವುದೇ ಕಾರಣಕ್ಕೂ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಾವೇರಿ ನೀರಿಗೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಆದರೆ ನಾವು ಕಷ್ಟದ ಪರಿಸ್ಥಿತಿಯಲ್ಲಿದ್ದೇವೆ. ನಮಗೂ ಬೆಳಗಳಿಗೆ ಹಾಗೂ ಕುಡಿಯಲು ನೀರು ಬೇಕು. ನೀರು ಇದ್ದಿದ್ದರೆ ಕೊಡುತ್ತಿದ್ದೆವು ಕುಡಿಯುವ ಬಳಕೆಗೂ ಇಲ್ಲದೆ ಮಾಡಿಕೊಂಡು ನೀರು ಕೊಡಲು ಸಾಧ್ಯವಿಲ್ಲ. ಹೀಗಾಗಿ ಅನಿವಾರ್ಯವಾಗಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ತಮಿಳನಾಡು ನಿಯೋದ ರಾಜ್ಯಕ್ಕೆ ಆಗಮಿಸಿದರ ಸೌಹಾರ್ದತೆಯಿಂದಲೇ ಮಾತನಾಡುತ್ತೇವೆ. ಕಾವೇರಿ ಕೊಳ್ಳದ ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದಿದ್ದಾರೆ.
ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ನಾಯಕ ಆಡುತ್ತಿದ್ದಾರೆ. ಇಷ್ಟೆಲ್ಲಾ ನಾಯಕಕ್ಕೆ ಕಾರಣ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಯಡಿಯೂರಪ್ಪ ಅವರಿಗೆ ಬರೆದ ಪತ್ರ. ಶಿಷ್ಟಾಚಾರದ ಪ್ರಕಾರ ಗೋವಾ ಮುಖ್ಯಮಂತ್ರಿ ನಮ್ಮ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಬೇಕಾಗಿತ್ತು. ಈಗ ಮಹದಾಯಿ ಕಾಮಗಾರಿ ಸ್ಥಳ ಪರಿಶೀಲಿಸಿದ್ದಾರೆ ಎಂದರು.