ಕೆ ಎಸ್ ಈಶ್ವರಪ್ಪ 
ರಾಜ್ಯ

ರಾಜ್ಯಪಾಲರ ಭಾಷಣದಲ್ಲಿ ತಿರುಳಿಲ್ಲ: ಬಿಜೆಪಿ ಆರೋಪ

ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ...

ಬೆಂಗಳೂರು: ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಭಾಷಣ ಮಾಡಿಸಿದ್ದಾರೆ. ಅವರ ಭಾಷಣದಲ್ಲಿ ಯಾವುದೇ ತಿರುಳಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.

ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿರುವ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ, ಸರ್ಕಾರದ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇಲ್ಲ. ರೈತರ ಸಾಲಮನ್ನಾ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಅವರು ತಿಳಿಸಿಲ್ಲ. ಇದು ಸರ್ಕಾರ ತಮಗೆ ಬೇಕಾದಂತೆ ರಾಜ್ಯಪಾಲರಲ್ಲಿ ಮಾಡಿಸಿದ ಭಾಷಣವಾಗಿದೆ. ಅವರ ಭಾಷಣದಲ್ಲಿ ಯಾವುದೇ ತಿರುಳಿಲ್ಲ ಎಂದು ಟೀಕಿಸಿದ್ದಾರೆ.

ಬಿಜೆಪಿ ನಾಯಕ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕೂಡ ಇದೇ ಮಾತುಗಳನ್ನು ಆಡಿದ್ದಾರೆ.

ಮುಂದಿನ ಐದು ವರ್ಷ ಸರ್ಕಾರ ಏನೇನು ಕಾರ್ಯಕ್ರಮ ರೂಪಿಸಲಿದೆ, ಜನರಿಗೆ ಉಪಯೋಗವಾಗುವಂತಹ ಯೋಜನೆಗಳ ಬಗ್ಗೆ ಯಾವುದೇ ಅಂಶಗಳು ರಾಜ್ಯಪಾಲರ ಭಾಷಣದಲ್ಲಿ ಇರಲಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT