ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿ 
ರಾಜ್ಯ

ತೆರಿಗೆ ವಂಚನೆ ಮಾಡಿಲ್ಲ, ನಿಯಮ ಪಾಲಿಸುವ ಕುಟುಂಬ ನಮ್ಮದು: ಸಿಎಂ ಕುಮಾರಸ್ವಾಮಿ

ಬಿಬಿಎಂಪಿಗೆ ತೆರಿಗೆ ವಂಚನೆ ಮಾಡಿಲ್ಲ, ನಿಯಮ ಪಾಲಿಸುವ ಕುಟುಂಬ ನಮ್ಮದು ಎಂದು ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ...

ಬೆಂಗಳೂರು: ಬಿಬಿಎಂಪಿಗೆ ತೆರಿಗೆ ವಂಚನೆ ಮಾಡಿಲ್ಲ, ನಿಯಮ ಪಾಲಿಸುವ ಕುಟುಂಬ ನಮ್ಮದು ಎಂದು ಮುಖ್ಯಮಂತ್ರಿ ಹೆಚ್.ಡಿ, ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ. 
ಬಿಬಿಎಂಪಿ ಟೋಟಲ್ ಸ್ಟೇಷನ್ ಸರ್ವೆ ವರದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಎಲ್ಲಾ ರೀತಿಯ ತೆರಿಗೆಯನ್ನು ಕಟ್ಟಲಾಗಿದೆ. ತೆರಿಗೆ ವಂಚನೆ ಕುರಿತ ಸುದ್ಧಿಗಳು ಸರಿಯಲ್ಲ ಎಂದು ಹೇಳಿದ್ದಾರೆ. 
ಸುಳ್ಳು ಸುದ್ದಿಗಳ ಮೂಲಕ ನಮ್ಮ ವಿರುದ್ಧ ಪಿತೂರಿ ನಡೆಸಲಾಗಿದೆ. ನಾವು ಯಾವುದೇ ರೀತಿಯ ತೆರಿಗೆ ವಂಚನೆ ಮಾಡಿಲ್ಲ. ನಿಯಮಗಳನ್ನು ಪಾಲನೆ ಮಾಡುವ ಕುಟುಂಬ ನಮ್ಮದು ಎಂದು ತಿಳಿಸಿದ್ದಾರೆ. 
ಬಿಬಿಎಂಪಿ ವ್ಯಾಪ್ತಿಯ 63 ಕಟ್ಟಡಗಳ ಮಾಲೀಕರು ಪಾಲಿಕೆ ಅಧಿಕಾರಿಗಳಿಗೆ ಸುಳ್ಳು ಆಸ್ತಿ ಘೋಷಣೆ ಮಾಡಿಕೊಂಡು ಹಲವು ವರ್ಷಗಳಿಂದ ಬರೋಬ್ಬರಿ ರೂ.559 ಕೋಟಿ ನಷ್ಟು ಆಸ್ತಿ ತೆರಿಗೆ ವಂಚನೆ ಮಾಡಿದ್ದು, ಇದರಲ್ಲಿ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ಕುಟುಂಬ ಸದಸ್ಯರಿಗೆ ಸೇರಿದ ಆಸ್ತಿಗಳಿವೆ ಎಂಬ ಆರೋಪಗಳು ಕೇಳಿಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!