ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ 
ರಾಜ್ಯ

ಶಿಷ್ಯ ಸ್ವೀಕಾರ ಮಾಡದ ಶಿರೂರು ಶ್ರೀಗಳಿಗೆ ಪಟ್ಟದ ದೇವರ ಹಸ್ತಾಂತರವಿಲ್ಲ: ಅಷ್ಟ ಮಠಾಧೀಶರ ಮಹತ್ವದ ನಿರ್ಧಾರ

ಉಡುಪಿ ಅಷ್ಟಮಠಾಧೀಶರ ನಡುವೆ ಶೀತಲ ಸಮರ ಬಹು ಹಿಂದಿನಿಂದಲೂ ನಡೆಯುತ್ತಿದ್ದು ಇದೀಗ ಶಿರೂರು ಶ್ರೀಗಳ ಶಿಷ್ಯ ಸ್ವೀಕಾರ ವಿಚಾರದಲ್ಲಿ ಇದು ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ.

ಉಡುಪಿ: ಉಡುಪಿ ಅಷ್ಟಮಠಾಧೀಶರ ನಡುವೆ ಶೀತಲ ಸಮರ ಬಹು ಹಿಂದಿನಿಂದಲೂ ನಡೆಯುತ್ತಿದ್ದು ಇದೀಗ ಶಿರೂರು ಶ್ರೀಗಳ ಶಿಷ್ಯ ಸ್ವೀಕಾರ ವಿಚಾರದಲ್ಲಿ ಇದು ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ. ಶಿಷ್ಯ ಸ್ವೀಕಾರ ಮಾಡದ ಶ್ರೀಗಳಿಗೆ ಅವರ ಪಟ್ಟದ ದೇವರನ್ನು ಹಸ್ತಾಂತರಿಸದಿರಲು ಉಳಿದ ಮಠಾಧೀಶರು ನಿರ್ಧರಿಸಿದ್ದಾರೆ.
ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಷ್ಟ ಮಠದ ಮಠಾಧಿಶರು ಪಾಲಿಸಬೇಕಾದ ನಿಯಮ ಪಾಲನೆ ಮಾಡುತ್ತಿಲ್ಲ ಎನ್ನುವ ಆರೋಪವಿದ್ದು ಇದೆಲ್ಲದರ ನಡುವೆಯೇ ಶ್ರೀಗಳಿಗೆ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಆ ಸಮಯ ಅವರು ನಿತ್ಯವೂ ಪೂಜಿಸುವ ಪಟ್ಟದ ದೇವರನ್ನು ಅದಮಾರು ಮಠದ ಕಿರಿಯ ಶ್ರೀಗಳಿಗೆ ಹಸ್ತಾಂತರಿಸಲಾಗಿತ್ತು. ಇದೀಗ ಚೇತರಿಸಿಕೊಂಡಿರುವ ಶ್ರೀಗಳಿಗೆ ಮತ್ತೆ ಪಟ್ಟದ ದೇವರನ್ನು ಹಸ್ತಾಂತರಿಸಲು ಅವರು ಶಿಷ್ಯ ಸ್ವೀಕಾರ ಮಾಡುವಂತೆ ಷರತ್ತು ಹಾಕಲಾಗಿದೆ.
ಈ ನಡುವೆ "ತಾನು ಚೇತರಿಸಿಕೊಂಡಿದ್ದು ಪಟ್ಟದ ದೇವರನ್ನು ಮರಳಿ ಕೇಳುತ್ತಿದ್ದೇನೆ.ಹಾಗೊಮ್ಮೆ ಕೊಡಲು ಒಪ್ಪದೆ ಹೋದಲ್ಲಿ ಕಾನೂನು ಹೋರಾಟ ನಡೆಸಲಾಗುತ್ತದೆ" ಎಂದು ಶಿರೂರು ಶ್ರೀಗಳು ಹೇಳಿದ್ದಾರೆ.
ಶಿಷ್ಯ ಸ್ವೀಕಾರ ವಿಚಾರವನ್ನು ಮುಂದೆ ಗಮನಿಸುತ್ತೇನೆ ಎಂದಿರುವ ಶ್ರೀಗಳಿಗೆ ಅವರು ಶಿಷ್ಯ ಸ್ವೀಕಾರ ಮಾಡುವವರೆಗೆ ದೇವರನ್ನು ಹಸ್ತಾಂತರಿಸದೆ ಇರಲು ಮಠಾಧೀಶರು ತೀರ್ಮಾನಿಸಿದ್ದಾರೆ. ಅಲಿಯವರೆಗೆ ಪಟ್ಟದ ದೇವರಿಗೆ ಕೃಷ್ಣಮಠದಲ್ಲಿಯೇ ಪೂಜೆ ನಡೆಯಲಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಧುಮುಕಲು ಮುಂದಾಗಿದ್ದ ಶಿರೂರು ಶ್ರೀಗಳು ಕಡೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದಿದ್ದರು. ಆ ವೇಳೆಯಲ್ಲಿಯೇ ಸ್ವಾಮೀಜಿಯ ಶಿಷ್ಯ ಸ್ವೀಕಾರದ ಕುರಿತು ಚರ್ಚೆ ಆರಂಭವಾಗಿತ್ತು ಇದೀಗ ಮತ್ತೆ ಚರ್ಚೆ ಮುನ್ನಲೆಗೆ ಬಂದಿದ್ದು ಸ್ವಾಮೀಜಿ ಕಡ್ಡಾಯವಾಗಿ ಶಿಷ್ಯ ಸ್ವೀಕಾರ ಮಾಡಬೇಕೆಂಬ ವಿಚಾರಕ್ಕೆ ಮತ್ತೆ ಜೀವ ಬಂದಿದೆ.
ಪರ್ಯಾಯ ಸ್ವೀಕರಿಸುವ ಶ್ರೀಗಳೇ ಪಟ್ಟದ ದೇವರ ಪೂಜೆ ಮಾಡಬೇಕೆನ್ನುವುದು ಅಷ್ಟಮಠಗಳ ನಿಯಮವಾಗಿದ್ದು ಒಂದು ವೇಳೆ ಶ್ರೀಗಳಿಗೆ ಅನಾರೋಗ್ಯವಾದರೆ ಅವರ ಶಿಷ್ಯ ದೇವರ ಪೂಜೆ ನೆರವೇರಿಸಬೇಕಾಗುವುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?