ಅಪಘಾತಕ್ಕೆ ಕಾರಣವಾದ ಲಾರಿ 
ರಾಜ್ಯ

ಕುಮಟಾ ಬಳಿ ಭೀಕರ ಅಪಘಾತ: ಲಾರಿ ಬಸ್ ಢಿಕ್ಕಿ, 3 ಸಾವು, 17 ಮಂದಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ.

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಜೆ 6 ಗಂಟೆ ಸುಮಾರಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್​ ಮತ್ತು ಲಾರಿ ನಡುವೆ ಢಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಮಟಾದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್​ ನ ಬಲಭಾಗ ಲಾರಿಯಲ್ಲಿದ್ದ ಕಬ್ಬಿಣದ ವಸ್ತುವಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್​ನ ಬಲಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು. ಬಲಬದಿ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದರೆ, ಇತರ 16 ಜನರಿಗೆ ಗಾಯಗಳಾಗಿವೆ.
ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕುಮಟಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT