ಮೆಟ್ರೋಗೆ ಇನ್ಫೋಸಿಸ್, ನಿಂದ 200 ಕೋಟಿ ರು. ದೇಣಿಗೆ 
ರಾಜ್ಯ

ಬೆಂಗಳೂರು: ನಮ್ಮ ಮೆಟ್ರೋಗೆ ಇನ್ಫೋಸಿಸ್ ನಿಂದ 200 ಕೋಟಿ ರು.

’ನಮ್ಮ ಮೆಟ್ರೋ’ ಕಾಮಗಾರಿಗಳಿಗಾಗಿ ಇನ್ಫೋಸಿಸ್ ಪ್ರತಿಷ್ಠಾನ 150 ರಿಂದ 200 ಕೋಟಿ ರೂ ದೇಣಿಗೆ ನಿಡುವುದಕ್ಕೆ ಸಮ್ಮತಿ ಸೂಚಿಸಿದೆ ಈ ಮೂಲಕ...

ಬೆಂಗಳೂರು: 'ನಮ್ಮ ಮೆಟ್ರೋ' ಕಾಮಗಾರಿಗಳಿಗಾಗಿ ಇನ್ಫೋಸಿಸ್ ಪ್ರತಿಷ್ಠಾನ 150 ರಿಂದ 200 ಕೋಟಿ ರೂ ದೇಣಿಗೆ ನಿಡುವುದಕ್ಕೆ ಸಮ್ಮತಿ ಸೂಚಿಸಿದೆ ಈ ಮೂಲಕ ಸಾಫ್ಟ್ ವೇರ್ ಸಂಸ್ಥೆಯು ಇತರೆ ಕಾರ್ಪೋರೇಟ್ ಸಂಸ್ಥೆಗಳಿಗೆ ಮಾದರಿಯಾಗಿದೆ.
ಇಂದು ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾದ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ  ಸುಧಾಮೂರ್ತಿ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. 
ಸುಧಾ ಮೂರ್ತಿ ಭೇಟಿ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ "ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಇನ್ಫೋಸಿಸ್ ನಾರಾಯಣಮೂರ್ತಿ ಕುಟುಂಬ ಇತರೆ ಕಾರ್ಪೋರೇಟ್ ಸಂಸ್ಥೆಗಳಿಗೆ ಮಾರದಿಯಾಗಿದೆ" ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಮೆಟ್ರೋ ಕಾಮಗಾರಿಗೆ ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಬೃಹತ್ ಕಾಣಿಕೆ ನೀಡಲಾಗುತ್ತಿದೆ. ಸುಮಾರು 150 ರಿಂದ 200 ಕೋಟಿ ರೂ.ಗಳನ್ನು ಕಾಣಿಕೆ ನೀಡಲು ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಕೋನಪ್ಪನ ಅಗ್ರಹಾರದಲ್ಲಿ ಮೆಟ್ರೋ ಹಳಿ ಮತ್ತು ಸ್ಟೇಷನ್ ಕಾಮಗಾರಿಗೆ  ಸಂಸ್ಥೆ ನೆರವು ನೀಡಲಿದೆ. ಆದರೆ ಮೆಟ್ರೋ ನಿಲ್ದಾಣವನ್ನು ಬಿಎಂಆರ್​ಸಿಎಲ್ ತಾನೇ ನಿರ್ಮಾಣ ಮಾಡಲಿದೆ. ಜುಲೈ 19ರಂದು ವಿಧಾನಸೌಧದಲ್ಲಿ ಬಿಎಂಆರ್​ಸಿಎಲ್ ಮತ್ತು ಇನ್ಫೋಸಿಸ್ ಫೌಂಡೇಶನ್ ನಡುವೆ ಈ ಸಂಬಂಧ ಒಪ್ಪಂದ ಏರ್ಪಡಲಿದೆ.
ಸುಧಾಮೂರ್ತಿ ಮಾತನಾಡಿ ಗಳಿಸಿರುವ ಹಣ ಸಾರ್ವಜನಿಕರಿಗೆ ಸದುಪಯೋಗವಾಗಬೇಕು ಎನ್ನುವುದು ನಮ್ಮ ಉದ್ದೇಶ. ಹೆಸರು ಗಳಿಸಲಿಕ್ಕಾಗಿ ಹಣ ನೀಡುವುದಿಲ್ಲ. ಜನಸೇವೆ, ಸಮಾಜಸೇವೆ ನಮ್ಮ ಧ್ಯೇಯವಾಗಿದೆ. ಆಡದೇ ಮಾಡುವವನು ರೂಢಿಯೊಳಗೆ ಉತ್ತಮ ಎನ್ನುವ ನುಡಿಯಂತೆ ನಮ್ಮ ಕೆಲಸವಿರಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು