ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಹೆಬ್ಬಾರಬೈಲಿನಲ್ಲಿ ತಡರಾತ್ರಿ ಮನೆಯಲ್ಲಿ ಮಲಗಿದ್ದ ಅಜ್ಜಿ ಮತ್ತು ಮೊಮ್ಮಗ ಮೃತಪಟ್ಟಿದ್ದಾರೆ.
ಇನ್ನೂ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ, ರಸ್ತೆಗಳು ಅಸ್ತವ್ಯಸ್ತ ಗೊಂಡಿವೆ,
ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಬಿಇಒಗಳಿಗೆ ರಜೆ ಘೋಷಣೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಕೊಡಗಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿ ಶ್ರೀವಿದ್ಯಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ