ಉಚಿತ ಬಸ್ ಪಾಸ್'ಗಾಗಿ ಪ್ರತಿಭಟನೆ: ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್ 
ರಾಜ್ಯ

ಉಚಿತ ಬಸ್ ಪಾಸ್'ಗಾಗಿ ಪ್ರತಿಭಟನೆ: ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್

ಉಚಿತ ಬಸ್ ಪಾಸ್ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಎಬಿವಿಬಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಶನಿವಾರ ನಡೆದಿದೆ...

ತುಮಕೂರು; ಉಚಿತ ಬಸ್ ಪಾಸ್ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಎಬಿವಿಬಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಶನಿವಾರ ನಡೆದಿದೆ. 
ಉಚಿತ ಬಸ್ ಆಗ್ರಹಿಸಿ ತುಮಕೂರಿನ ಶಿವಕುಮಾರ ಸ್ವಾಮೀಜಿ ಮೃತ್ತದಲ್ಲಿ ರಸ್ತೆ ತಡೆ ನಡೆಸಲು ಮುಂದಾಗಿದ್ದ ಪ್ರತಿಭಟನಿರತ ವಿದ್ಯಾರ್ಥಿಗಳನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆಂದು ತಿಳಿದುಬಂದಿದೆ. 
ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದರು. ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಲಾಠಿ ಚಾರ್ಜ್ ನಡೆಸಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT