ರಾಜ್ಯ

ಮಾವಿಗೆ ಬೆಂಬಲ ಬೆಲೆ ಘೋಷಿಸಿದ ಸಿಎಂ ಕುಮಾರಸ್ವಾಮಿ

Lingaraj Badiger
ಬೆಂಗಳೂರು: ಸಂಕಷ್ಟದಲ್ಲಿರುವ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಪ್ರತಿ ಕೆಜಿ ಮಾವಿಗೆ 2.5 ರುಪಾಯಿ(ಟನ್ ಗೆ 2,500) ಬೆಂಬಲ ಬೆಲೆ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾವಿಗೆ ಬೆಂಬಲ ಬೆಲೆ ನೀಡುವ ನಿರ್ಧಾರ ಪ್ರಕಟಿಸಿದ ಸಿಎಂ, ರಾಜ್ಯದಲ್ಲಿ ಈ ಬಾರಿ ಮಾವಿನ ಫಸಲು ಹೆಚ್ಚಿನ ಪ್ರಮಾಣದಲ್ಲಿ ಬಂದಿಲ್ಲ. ಆಂಧ್ರ ಪ್ರದೇಶದಲ್ಲೂ ಇದೆ ಸ್ಥಿತಿ ಇದೆ. ಹೀಗಾಗಿ ನಮ್ಮ ರಾಜ್ಯದ ಮಾವು ತರಿಸಿಕೊಳ್ಳದಂತೆ ನಿಷೇಧ ವಿಧಿಸಲಾಗಿದೆ. ಇದರಿಂದ ರಾಜ್ಯದ ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಚರ್ಚಿಸಿ ಮಾವಿನ ಸಮಸ್ಯೆ ಪರಿಹರಿಸಲು ಯತ್ನಿಸಿದೆ. ಆದರೆ ಆಂಧ್ರ ಸಿಎಂ ಸಿಂಗಾಪುರಕ್ಕೆ ಹೋಗಿರುವುದರಿಂದ ಮಾತನಾಡಲು ಸಾಧ್ಯವಾಗಲಿಲ್ಲ ಎಂದರು.
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮಾವಿಗೆ ಬೆಂಬಲ ಬೆಲೆ ನೀಡಲಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 17ರಿಂದ 20 ಕೋಟಿ ರುಪಾಯಿ ಹೊರೆಯಾಗಲಿದೆ ಎಂದು ಸಿಎಂ ವಿವರಿಸಿದರು.
SCROLL FOR NEXT