ಹಾವೇರಿ: ಜಾವಲಿನ್ ಥ್ರೋ ವೇಳೆ ಕುತ್ತಿಗೆಗೆ ಈಟಿ ಚುಚ್ಚಿ ವಿದ್ಯಾರ್ಥಿ ಸಾವು
ಶಾಲೆಯಲ್ಲಿ ಜಾವಲಿನ್ ಥ್ರೋ (ಈಟಿ ಎಸೆತ) ಆಡುವಾಗ ಜಾವಲಿನ್ ತುದಿ ಚುಚ್ಚಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ: ಶಾಲೆಯಲ್ಲಿ ಜಾವಲಿನ್ ಥ್ರೋ (ಈಟಿ ಎಸೆತ) ಆಡುವಾಗ ಜಾವಲಿನ್ ತುದಿ ಚುಚ್ಚಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಲ್ಲಿಕ್ (16) ಮೃತ ದುರ್ದೈವಿ.
ಮಂಗಳವಾರ ಶಾಲೆಯಲ್ಲಿ ಜಾವಲಿನ್ ಥ್ರೋ ಆಡುವಾಗ ವಿದ್ಯಾರ್ಥಿಯೊಬ್ಬ ಎಸೆದಿದ್ದ ಈಟಿ ಮಲ್ಲಿಕ್ ಕುತ್ತಿಗೆಗೆ ಚುಚ್ಚಿಕೊಂಡಿತ್ತು. ಆ ತಕ್ಷಣ ಮಲ್ಲಿಕ್ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಲ್ಲಿಕ್ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಸಾವಿನ ಕಾರಣ ಶಾಲೆಯನ್ನು ಸ್ವಯಂಪ್ರೇರಿತವಾಗಿ ಮುಚ್ಚಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.