ರಾಜ್ಯ

ಅನಧಿಕೃತ ಕಟ್ಟಡ ನಿರ್ಮಾಣ ತಡೆಗೆ ಹೊಸ ಕಾನೂನು: ಜಿ. ಪರಮೇಶ್ವರ್

Manjula VN
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಕಟ್ಟಡಗಳ ನಿರ್ಮಾಣ ತಡೆಯಲು ಅಗತ್ಯವಾದ ಹೊಸ ಕಾನೂನು ರೂಪಿಸುವುದಾಗಿ ಸರ್ಕಾರ ಮಂಗಳವಾರ ತಿಳಿಸಿದೆ. 
ಜೆಡಿಎಸ್ ಸದಸ್ಯ. ಅ.ದೇವೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಗೆ ಅಗತ್ಯ ಹೊಸ ಕಾನೂನು ರಚನೆಗೆ ಚಿಂತನೆಗಳು ನಡೆಯುತ್ತಿವೆ. ಈ ಸಂಬಂಧ ಅನುಭವಿ ಶಾಸಕರು, ಕಾನೂನು ಪಂಡಿತರು ಹಾಗೂ ನಗರಾಭಿವೃದ್ಧಿ ತಜ್ಞರ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. 
ನಗರದಲ್ಲಿ ಮುಂದೆ ನಿರ್ಮಾಣವಾಗುವ ಕಟ್ಟಡಗಳಲ್ಲಿ ಕಾನೂನು ಉಲ್ಲಂಘನೆ ತಡೆಯಲು ಅಗತ್ಯ ಕಾನೂನು ರೂಪಿಸಬೇಕಾದ ಅಗತ್ಯವಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಕಾನೂನು ಪಂಡಿತರು, ಅನುಭವಿ ಶಾಸಕರು ಮತ್ತು ನಗರಾಭಿವೃದ್ಧಿ ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು. 
ಮಹದೇವಪುರದಲ್ಲಿ ಬಿಬಿಎಂಪಿ ಪ್ರಾಯೋಗಿಕವಾಗಿ ಖಾಸಗಿ ಸಂಸ್ಥೆಯೊಂದರಿಂದ ನಡೆಸಿದ ಸಮೀಕ್ಷೆಯಲ್ಲಿ 77 ಕಟ್ಟಡಗಳನ್ನು ಅನಧಿಕೃತವಾಗಿ ನಿರ್ಮಿಸಿರುವುದು ಕಂಡು ಬಂದಿದೆ. ಇದರಿಂದ ರೂ.450 ಕೋಟಿ ದಂಡ ಸಹಿತ ತೆರಿಗೆ ಸಂಗ್ರಹಿಸಲಾಗಿದೆ ಎಂದರು. 
SCROLL FOR NEXT