ಕೊಡಗು ಜಿಲ್ಲೆಯಲ್ಲಿ ಮುಂದುವರಿದ ವರ್ಷಧಾರೆ; ಶಾಲಾ, ಕಾಲೇಜುಗಳಿಗೆ ರಜೆ
ಜಿಲ್ಲೆಯಲ್ಲಿ ಗುರುವಾರ ಕೂಡ ಭಾರೀ ಮಳೆ ಮುಂದುವರಿದಿದ್ದು ಪ್ರವಾಹದ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ಕೂಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ...
ಕೊಡಗು: ಜಿಲ್ಲೆಯಲ್ಲಿ ಗುರುವಾರ ಕೂಡ ಭಾರೀ ಮಳೆ ಮುಂದುವರಿದಿದ್ದು ಪ್ರವಾಹದ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ಕೂಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪಿ ಐ ಶ್ರೀ ವಿದ್ಯಾ ಆದೇಶ ಹೊರಡಿಸಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಎಡಬಿಡದೆ ಸರಿಯುತ್ತಿರುವ ಮಳೆಯಿಂದ ಸಾರ್ವಜನಿಕರು ನಿತ್ಯದ ಕೆಲಸ ಕಾರ್ಯಗಳಿಗೆ ಮನೆಯಿಂದ ಹೊರ ಹೋಗುವುದು ಕಷ್ಟವಾಗುತ್ತಿದೆ. ಜನರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ 24×7 ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 08272- 221077 ನ್ನು ಸಂಪರ್ಕಿಸಲು ಕೋರಿದ್ದಾರೆ.
ದೇಶಾದ್ಯಂತ ನೈಋತ್ಯ ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದಲ್ಲೂ ಅದರಲ್ಲೂ ಕರಾವಳಿ, ದಕ್ಷಿಣ ಕನ್ನಡ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಮೊನ್ನೆ ಭಾನುವಾರದಿಂದ ನಿನ್ನೆ ಬೆಳಗ್ಗೆ 8.30ರ ಹೊತ್ತಿಗೆ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 104.56 ಮಿ.ಮೀ. ಕಳೆದ ವರ್ಷ ಇದೇ ದಿನ 22.60 ಮಿ.ಮೀ ದಾಖಲಾಗಿತ್ತು.
ಹಾರಂಗಿ ಜಲಾಶಯದ ನೀರಿನ ಮಟ್ಟ 2,859 ಅಡಿಗಳಾಗಿದ್ದು ನಿನ್ನೆ ನೀರಿನ ಮಟ್ಟ 2806.80 ಅಡಿಗಳಾಗಿದ್ದವು. ಕಳೆದ ವರ್ಷ ಇದೇ ದಿನ 2808.07 ಅಡಿಗಳಷ್ಟು ನೀರು ತುಂಬಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.