ಕುಮಾರಸ್ವಾಮಿ-ಕೃಷಿ ತಜ್ಞ ಸ್ವಾಮಿನಾಥನ್ ಸಭೆ, ರೈತರ ಸಮಸ್ಯೆ ಕುರಿತು ಚರ್ಚೆ 
ರಾಜ್ಯ

ಕೃಷಿ ತಜ್ಞ ಸ್ವಾಮಿನಾಥನ್ ಜೊತೆ ಹೆಚ್ ಡಿ ಕುಮಾರಸ್ವಾಮಿ ಸಭೆ, ರೈತರ ಸಮಸ್ಯೆ ಕುರಿತು ಚರ್ಚೆ

ರಾಜ್ಯದ ರೈತರ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ವಿಶ್ವದ ವಿವಿಧೆಡೆಗಳಲ್ಲಿ ಅಳವಡಿಸಿಕೊಳ್ಳಲಾದ ಉತ್ತಮ ಕೃಷಿ ಪದ್ದತಿಯ ಜಾರಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು.....

ಬೆಂಗಳೂರು: ರಾಜ್ಯದ ರೈತರ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ವಿಶ್ವದ ವಿವಿಧೆಡೆಗಳಲ್ಲಿ ಅಳವಡಿಸಿಕೊಳ್ಳಲಾದ ಉತ್ತಮ ಕೃಷಿ ಪದ್ದತಿಯ ಜಾರಿಗೆ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ತಿಳಿಸಿದ್ದಾರೆ.
ರಾಜ್ಯದಲ್ಲಿ ರೈತರ ಸುಧಾರಣೆ, ಕೃಷಿ ಅಭಿವೃದ್ದಿಗೆ ಕಾರಣವಾಗಿದ್ದ ಕೃಷಿ ತಜ್ಞ ಡಾ.ಎಸ್.ಎಸ್. ಸ್ವಾಮಿನಾಥನ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಕುಮಾರಸ್ವಾಮಿ ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ಅಳವಡಿಕೆ ಕುರಿತಂತೆ ಬಜೆಟ್ ಪ್ರಸ್ತಾವನೆಯನ್ನು ಸ್ವಾಮಿನಾಥನ್ ಸ್ವಾಗತಿಸಿದ್ದಾರೆ ಎಂದು ತಿಳಿಸಿದರು.
ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಲುವಾಗಿ ಸ್ವಾಮಿನಾಥನ್ ಅವರಿಂದ ಸಲಹೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. 
ಶೀಘ್ರವೇ ಕೃಷಿ ಸಚಿವ ಶಿವಶಂಕರ ರೆಡ್ಡಿ 30 ಜಿಲ್ಲೆಗಳ ಕೃಷಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ ಮತ್ತು ಪ್ರತಿ ಜಿಲ್ಲೆಯಲ್ಲಿ ಕಂಡುಬರುವ ಸಮಸ್ಯೆಯನ್ನು ಅಧಿಕಾರಿಗಳ ಜತೆ ಚರ್ಚಿಸಲಾಗುತ್ತದೆ.ಹಾಗೆಯೇ ಆಯಾ ಜಿಲ್ಲೆಗೆ ನಿರ್ದಿಷ್ಟ ಪರಿಹಾರಗಳನ್ನು ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಕೃಷಿ ಅಧಿಕಾರಿಗಳ ಸಭೆಯಲ್ಲಿ ತಾವೂ ಭಾಗವಹಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!

ಉಕ್ರೇನ್ ನಲ್ಲಿ ರಷ್ಯಾ ಡ್ರೋನ್ ದಾಳಿ: ಭಾರತೀಯರ ಒಡೆತನದ ಔಷಧ ಘಟಕ ಧ್ವಂಸ, ಓರ್ವ ಸಾವು, ಹಲವರಿಗೆ ಗಾಯ! Video

ಪ್ರಿಯತಮೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗಂಡ; ಪ್ರಶ್ನಿಸಿದ್ದಕ್ಕೆ ಕಾರಿನ ಬಾನೆಟ್ ಮೇಲೆ ಪತ್ನಿಯನ್ನೇ ಎಳೆದೊಯ್ದ!-Video

‘ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು’: 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ