ಹೈದರಾಬಾದ್: ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಹೈದರಾಬಾದ್ ಮೂಲದ ವ್ಯಕ್ತಿಯೋರ್ವನನ್ನು ಸ್ಥಳೀಯರು ಥಳಿಸಿದ್ದು ಪರಿಣಾಮ ಆತ ಮೃತಪಟ್ಟಿದ್ದಾನೆ.
ಕರ್ನಾಟಕದ ಬೀದರ್ ನ ಮುರ್ಕಿ ಗ್ರಾಮದಲ್ಲಿ 2500ಕ್ಕೂ ಹೆಚ್ಚು ಮಂದಿ ನಾಲ್ವರನ್ನು ತೀವ್ರವಾಗಿ ಥಳಿಸಿದ್ದು ಇದರಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ನಾಲ್ವರು ಪೊಲೀಸರು ಸಹ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ ನಲ್ಲಿ ಮಕ್ಕಳ ಕಳ್ಳರು ವದಂತಿ ಮುರ್ಕಿ ಗ್ರಾಮದಲ್ಲಿ ಹರಡಿದ್ದು ಈ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನ ನಾಲ್ವರ ಮೇಲೆ ತೀವ್ರ ಹಲ್ಲೆ ನಡೆಸಿದ್ದು ಪರಿಣಾಮ ಓರ್ವ ಮೃತಪಟ್ಟಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ 32 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.