ತುಂಬಿ ಹರಿಯುತ್ತಿದೆ ಕೆಆರ್'ಎಸ್: 30 ಸಾವಿರ ಕ್ಯೂಸೆಕ್ ನೀರು ನದಿಗೆ 
ರಾಜ್ಯ

ತುಂಬಿ ಹರಿಯುತ್ತಿದೆ ಕೆಆರ್'ಎಸ್: 30 ಸಾವಿರ ಕ್ಯೂಸೆಕ್ ನೀರು ನದಿಗೆ

ರಾಜ್ಯದ ಮಲೆನಾಡು ಮತ್ತು ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ನದಿ ತುಂಬಿ ಹರಿಯುತ್ತಿದ್ದು, ಕೆಆರ್'ಎಸ್ ಅಧಿಕಾರಿಗಳು ಕ್ರಸ್ಟ್ ಗೇಟ್'ಗಳಿಗೆ ಪೂಜೆ ಸಲ್ಲಿಸಿದ ಬಳಿಕ ಶನಿವಾರ...

ಬೆಂಗಳೂರು; ರಾಜ್ಯದ ಮಲೆನಾಡು ಮತ್ತು ಕೇರಳದ ವಯನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ನದಿ ತುಂಬಿ ಹರಿಯುತ್ತಿದ್ದು, ಕೆಆರ್'ಎಸ್ ಅಧಿಕಾರಿಗಳು ಕ್ರಸ್ಟ್ ಗೇಟ್'ಗಳಿಗೆ ಪೂಜೆ ಸಲ್ಲಿಸಿದ ಬಳಿಕ ಶನಿವಾರ 30,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಿದರು. 
ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕೆಆರ್'ಎಸ್, ಕಬಿನಿ, ಹೇಮಾವತಿ, ಹಾರಂಗಿ ಅಣೆಕಟ್ಟುಗಳು ಜುಲೈಗೆ ಮೊದಲೇ ಸಂಪೂರ್ಣ ಭರ್ತಿಯಾಗಿದ್ದು, ರೈತರ ಮುಖದಲ್ಲಿ ಸಂತಸ ಮೂಡುವಂತೆ ಮಾಡಿದೆ. 
ಕಾವೇರಿ ನದಿಯ ಪ್ರಮುಖ ಉಪನದಿ ಕಪಿಲಾಗೆ ಮೈಸೂರು ಜಿಲ್ಲೆಯಲ್ಲಿ ಕಟ್ಟಲಾಗಿರುವ ಕಬಿನಿ ಜಲಾಶಯ ಜೂ.18ರಂದೇ ಭರ್ತಿಯಾಗಿದ್ದು, ಕಾವೇರಿ ನದಿ ಹುಟ್ಟುವ ಕೊಡಗಿನ ಹಾರಂಗಿ ಜಲಾಶಯವೂ ಜು.7ರಂದು ಭರ್ತಿಯಾಗಿತ್ತು. ಇದೀಗ ಮಂಡ್ಯ ಜಿಲ್ಲೆಯ ಕೆಆರ್'ಎಶ್ ಮತ್ತು ಹಾಸನ ಜಿಲ್ಲೆಯಲ್ಲಿರುವ ಹೇಮಾವತಿ ಜಲಾಶಯಗಳೂ ಶನಿವಾರದಂದು ಭರ್ತಿಯಾಗುವುದರೊಂದಿಗೆ ನಾಲ್ಕೂ ಜಲಾಶಯಗಳು ಜುಲೈನಲ್ಲಿಯೇ ಭರ್ತಿಯಾಗಿವೆ. 
ಕೆಆರ್'ಎಸ್ ನಾಲ್ಕು ವರ್ಷದ ಬಳಿಕ ಜುಲೈ.2ನೇ ವಾರದಲ್ಲೇ ಭರ್ತಿಯಾಗಿದೆ. 124.8 ಅಡಿ ಗರಿಷ್ಠ ಮಟ್ಟವಿರುವ ಅಣೆಕಟ್ಟೆಯಲ್ಲಿ ಶನಿವಾರ ಸಂಜೆ ವೇಳೆಗೆ 123.65 ಅಡಿ ನೀರು ತುಂಬಿದೆ. 
ಹಾರಂಗಿ ಮತ್ತು ಹೇಮಾವತಿ ಜಲಾಶಯಗಳಿಂದಲೂ ತಲಾ 14 ಸಾವಿರ ಕ್ಯೂಸೆಕ್ ನೀರು ನದಿಯ ಮೂಲಕ ಕೆಆರ್'ಎಸ್'ಗೆ ಹರಿದು ಬರುತ್ತಿದೆ. ಹೀಗಾಗಿ ನಿನ್ನೆ ಮಧ್ಯಾಹ್ನ 1.20 ವೇಳೆಗೆ ಪೂಜೆ ಸಲ್ಲಿಸಿದ ಬಳಿಕ ನೀರನ್ನು ನದಿಗೆ ಹರಿಸಿದರು. 
ಒಟ್ಟಾರೆ 43072ಕ್ಯೂಸೆಕ್'ಗೂ ಅಧಿಕ ಪ್ರಮಾಣದ ಒಳಹರಿವು ಇದ್ದು, ಸಂಜೆ ವೇಳೆಗ 11 ಗೇಟ್ ಗಳ ಮೂಲಕ 30,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಪ್ರವಾಹದ ಮುನ್ನೆಚ್ಚರಿಕೆಗಳನ್ನು ಈಗಾಗಲೇ ಸ್ಥಳೀಯರಿಗೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ