ಬೆಂಗಳೂರು: ಬೀದರ್ ಸಾಮೂಹಿಕ ಹಲ್ಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೀದರ್ ಸಾಮೂಹಿಕ ಹಲ್ಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಕೃತ್ಯಗಳು ಮತ್ತೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅಂತೆಯೇ ಎಲ್ಲ ಗ್ರಾಮಗಳಲ್ಲೂ ಈ ಬಗ್ಗೆ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಕಳೆದ ಶುಕ್ರವಾರ ಬೀದರ್ ಮೂರ್ಕಿ ಗ್ರಾಮದಲ್ಲಿ ಮಕ್ಕಳಿಗೆ ಚಾಕೊಲೇಟ್ ನೀಡಲು ಮುಂದಾಗಿದ್ದ ಟೆಕ್ಕಿಗಳನ್ನು ಮಕ್ಕಳ ಕಳ್ಳರು ಎಂದು ಭಾವಿಸಿ ಸ್ಥಳೀಯ ಗ್ರಾಮಸ್ಥರು ಸಾಮೂಹಿಕ ಹಲ್ಲೆ ಮಾಡಿದ್ದರು. ಈ ವೇಳೆ ಹೈದರಾಬಾದ್ ಮೂಲದ ಟೆಕ್ಕಿ ಮಹಮದ್ ಅಜಮ್ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದರು.