ಹತ್ಯೆ ಗೀಡಾದ ಟೆಕ್ಕಿ ಮಹಮದ್ ಅಜಮ್ 
ರಾಜ್ಯ

'ನನ್ನ ಮಗ ಪಾಕಿಸ್ತಾನಕ್ಕೆ ಹೋಗಿರಲಿಲ್ಲ, ಕರ್ನಾಟಕಕ್ಕೆ ಹೋಗಿದ್ದ, ಆದರೂ ಹೊಡೆದು ಕೊಂದರು'

ಮಕ್ಕಳ ಕಳ್ಳ ಎಂದು ತಪ್ಪಾಗಿ ಭಾವಿಸಿ ಹೈದರಾಬಾದ್ ಮೂಲದ ಟೆಕ್ಕಿಯನ್ನು ಹೊಡೆದು ಕೊಂದ ಘಟನೆಗೆ ಸಂಬಂಧಿಸಿದಂತೆ ಟೆಕ್ಕಿ ಮಹಮದ್ ಆಜಮ್ ತಾಯಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಹೈದರಾಬಾದ್: ಮಕ್ಕಳ ಕಳ್ಳ ಎಂದು ತಪ್ಪಾಗಿ ಭಾವಿಸಿ ಹೈದರಾಬಾದ್ ಮೂಲದ ಟೆಕ್ಕಿಯನ್ನು ಹೊಡೆದು ಕೊಂದ ಘಟನೆಗೆ ಸಂಬಂಧಿಸಿದಂತೆ ಟೆಕ್ಕಿ ಮಹಮದ್ ಆಜಮ್ ತಾಯಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು, ನನ್ನ ಪಾಕಿಸ್ತಾನಕ್ಕೆ ಹೋಗಿರಲಿಲ್ಲ. ಕರ್ನಾಟಕಕ್ಕೆ ಹೋಗಿದ್ದ ಆದರೂ ಆತನನ್ನು ಹೊಡೆದು ಕೊಂದರು ಎಂದು ಕಣ್ಣೀರು ಹಾಕಿದ್ದಾರೆ.
ಹೈದರಾಬಾದ್ ನಲ್ಲಿ ಮಾತನಾಡಿದ ಟೆಕ್ಕಿ ಮಹಮದ್ ಅಜಮ್ ತಾಯಿ, ನನ್ನ ಮಗ ಸಾಫ್ಟ್ ವೇರ್ ಇಂಜಿನಿಯರ್. ಆತ ಎಂದೂ ಒಂದು ಸಣ್ಣ ಪ್ರಾಣಿಗೂ ಹಾನಿ ಮಾಡಿದನಲ್ಲ. ಹೀಗಿರುವಾಗ ಮಕ್ಕಳನ್ನು ಹೇಗೆ ಕದಿಯಲು ಸಾಧ್ಯ. ಮಕ್ಕಳ ಕಳ್ಳ ಎಂದು ಭಾವಿಸಿ ಆತನನ್ನು ಹೊಡೆದು ಕೊಂದು ಹಾಕಿದ್ದಾರೆ. ಇದು ನಿಜಕ್ಕೂ ಅಕ್ಷ್ಯಮ್ಯ. ನನ್ನ ಮಗ ಪಾಕಿಸ್ತಾನಕ್ಕೆ ಹೋಗಿರಲಿಲ್ಲ. ಕರ್ನಾಟಕಕ್ಕೆ ಹೋಗಿದ್ದ, ಆದರೂ ಆತನ್ನು ಕೊಂದು ಹಾಕಲಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಹಮದ್ ಅಜಮ್ ಸಹೋದರಿ, ನನ್ನ ಸಹೋದರ 2 ವರ್ಷದ ಮಗುವಿನ ತಂದೆ. ತನ್ನ ಮೇಲೆ ದಾಳಿ ಮಾಡಲು ಬಂದ ಸ್ಥಳೀಯರಿಗೆ ಐಡಿ ಕಾರ್ಡ್ ತೋರಿಸಿದ್ದಾನೆ. ಹೀಗಿದ್ದೂ ಆತನನ್ನು ನಂಬದೇ ಆತನ ಮೇಲೆ ದಾಳಿ ಮಾಡಿದ್ದಾರೆ. ಆತನ ಮೇಲೆ ನಂಬಿಕೆ ಇಲ್ಲ ಎಂದ ಮೇಲೆ ಪೊಲೀಸರಿಗೆ ಒಪ್ಪಿಸಬಹುದಿತ್ತು. ಹೊಡೆದು ಕೊಲ್ಲುವಂತಹ ಅಪರಾಧ ನನ್ನಸಹೋದರ ಏನು ಮಾಡಿದ್ದ ಎಂದು ಆಕೆ ಪ್ರಶ್ನಿಸಿದ್ದಾರೆ.
ಇದೇ ಶುಕ್ರವಾರ ಬೀದರ್ ಜಿಲ್ಲೆಯ ಮುರ್ಕಿ ಗ್ರಾಮದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಟೆಕ್ಕಿ ಮಹಮದ್ ಅಜಮ್ ಮತ್ತು ಆತನ ಇತರೆ ನಾಲ್ಕು ಸ್ನೇಹಿತರನ್ನು ಸ್ಥಳೀಯ ಸುಮಾರು 2500ಕ್ಕೂ ಹೆಚ್ಚು ಜನ ಮಕ್ಕಳ ಕಳ್ಳರು ಎಂದು ಭಾವಿಸಿ ಹಲ್ಲೆ ಮಾಡಿದ್ದರು. ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ ಟೆಕ್ಕಿ ಮಹಮದ್ ಅಜಮ್ ಸಾವನ್ನಪ್ಪಿದ್ದ. ಇನ್ನು ಘಟನೆಯಲ್ಲಿ ಮಧ್ಯ ಪ್ರವೇಶ ಮಾಡಿದ್ದ ಪೊಲೀಸರ ಮೇಲೂ ಸ್ಥಳೀಯರು ಹಲ್ಲೆ ಮಾಡಿದ್ದರು. ಈ ವೇಳೆ ನಾಲ್ಕು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT