ರಾಜ್ಯ

ರಿಯಾಯಿತಿ ದರದ ಬಸ್ ಪಾಸ್ ಪಡೆಯಲು ಜುಲೈ 31 ರೊಳಗೆ ಅರ್ಜಿ ಸಲ್ಲಿಸಿ: ಬಿಎಂಟಿಸಿ ಅಧಿಕಾರಿಗಳು

Manjula VN
ಬೆಂಗಳೂರು; ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ ಗಳನ್ನು ಪಡೆಯಲು ವಿದ್ಯಾರ್ಥಿಗಳು ಜುಲೈ.31ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. 
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಎಂಟಿಸಿ ಮುಖ್ಯಸ್ಥರು, ಶಾಲಾ, ಕಾಲೇಜುಗಳಿಗೆ ದಾಖಲಾಗುವ ವಿದ್ಯಾರ್ಥಿಗಳು ಬಿಎಂಟಿಸಿ ಬಸ್ ಪಾಸ್ ಗಳಿಗಾಗಿ ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ಜು.31ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದೆ. 
ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಇನ್ನು ಮುಂದೆ ಅರ್ಜಿ ಸಲ್ಲಿಸಲು ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್'ಲೈನ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಬಿಎಂಟಿಸಿ ಆನ್'ಲೈನ್'ನಲ್ಲಿಯೇ ಅರ್ಜಿ ಸಲ್ಲಿಸುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಿದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಂಸ್ಥೆಗಳ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 
ವಿದ್ಯಾರ್ಥಿಗಳು www.mybmtc.com ವೆಬ್'ಸೈಟ್ ಹೋಗಿ ಐವಿಆರ್ ಆಯ್ಕೆಗಳೊಂದಿಗೆ ತಮ್ಮ ಮೊಬೈಲ್ ಗಳಿಂದಲೇ ಇ-ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬಳಿಕ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಆಯಾ ಶಿಕ್ಷಣ ಸಂಸ್ಥೆಗಳಿಗೇ ಬಿಎಂಟಿಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ವಿತರಣೆ ಮಾಡಲಿದೆ. 
ಒಂದನೇ ತರಗತಿಯಿಂದ 7ನೇ ತರಗತಿ ಓದುವ ವಿದ್ಯಾರ್ಥಿಗಳಿಗೆ ರೂ.150, ಫ್ರೌಢಶಾಲೆಯ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರೂ.200, ಇತರೆ ಪಂಗಡದ ವಿದ್ಯಾರ್ಥಿಗಳಿಗೆ ಹುಡುಗಿಯರಿಗೆ ರೂ.600 ಮತ್ತು ಹುಡುಗರಿಗೆ ರೂ.800, ಕಾಲೇಜು ವಿದ್ಯಾರ್ಥಿಗಳಿಗೆ ರೂ.1,100 ಮತ್ತು ಕಾಲೇಜಿನ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರೂ.200ಗಳನ್ನು ನಿಗದಿ ಪಡಿಸಲಾಗಿದ್ದು, ವಿದ್ಯಾರ್ಥಿಗಳು ಜು.31ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ಬಿಎಂಟಿಸಿ ತಿಳಿಸಿದೆ. 
SCROLL FOR NEXT