ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಶಿರೂರು ಶ್ರೀಗಳು 
ರಾಜ್ಯ

ಶಿರೂರು ಶ್ರೀಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತವಾದರೆ ತನಿಖೆ ಅನಿವಾರ್ಯ: ಸಿಎಂ ಕುಮಾರಸ್ವಾಮಿ

ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ...

ಬೆಂಗಳೂರು: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಶ್ರೀಗಳ ಅಕಾಲಿಕ ನಿಧನ ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ನಷ್ಟವನ್ನುಂಟುಮಾಡಿದೆ. ಅವರ ಸಾವಿನ ಬಗ್ಗೆ ಕೇಳಿಬರುತ್ತಿರುವ ಅನುಮಾನಗಳಿಗೆ ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಶಿರೂರು ಶ್ರೀಗಳ ಆಕಸ್ಮಿಕ ಸಾವು ನೋವು ತಂದಿದೆ. ಅವರ ಸಾವಿನ ಸಂಶಯದ ಬಗ್ಗೆ ನಮಗೆ ಈವರೆಗೆ ಯಾವುದೇ ಸರ್ಕಾರದ ಮಟ್ಟದಲ್ಲಿ ಅಧಿಕೃತ ಮಾಹಿತಿ ಬಂದಿಲ್ಲ, ಬಂದರೆ ತನಿಖೆಗೆ ವಹಿಸುವ ಕುರಿತು ತೀರ್ಮಾನಿಸಲಾಗುವುದು ಎಂದರು.

ಉಡುಪಿಯ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ದೈವಾಧೀನರಾಗಿರುವುದು ಮನಸ್ಸಿಗೆ ಅತೀವ ನೋವು ತಂದಿದೆ. ಜನರ ಜೊತೆ ಸಾಮಾನ್ಯರಂತೆ ಬೆರೆಯುತ್ತಿದ್ದ ಹಾಗೂ ಶ್ರೀಕೃಷ್ಣನ ಸೇವೆಯಲ್ಲಿ ಅಪಾರ ಶ್ರದ್ಧೆ ಹೊಂದಿದ್ದ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಸಹ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT