ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ 
ರಾಜ್ಯ

ಉಡುಪಿ: ಶಿರೂರು ಮಠದ ಲಕ್ಷ್ಮೀವರ ಶ್ರೀ ನಿಧನ

ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗಿದೆ ಗುರುವಾರ ಬೆಳಗ್ಗೆ ...

ಉಡುಪಿ: ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿನ್ನೆ ತೀವ್ರ ಅನಾರೋಗ್ಯದಿಂದ ಶ್ರೀಗಳು ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಹೊಟ್ಟೆಯಲ್ಲಿ ತೀವ್ರ ರಕ್ತ ಸ್ರಾವವಾಗಿ ನಿನ್ನೆ ದಾಖಲಾಗಿದ್ದ ಶ್ರೀಗಳನ್ನು ವೈದ್ಯರು ಕಾಲಕಾಲಕ್ಕೆ ನಿಗಾವಹಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಶ್ರೀಗಳು ಬಳಲುತ್ತಿದ್ದರು.

ಶಿರೂರು ಮಠದ 30ನೇ ಯತಿಗಳಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮಿಗಳು ಮೂರು ಪರ್ಯಾಯಗಳನ್ನು ಪೂರೈಸಿದ್ದರು. ಶ್ರೀಗಳ ನಿಧನ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಅಲ್ಲದೆ ಸ್ವಾಮೀಜಿ ಗೌರವಾರ್ಥ ಉಡುಪಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಇಡೀ ಪಟ್ಟಣ ಶೋಕಸಾಗರದಲ್ಲಿ ಮುಳುಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT