ಎಚ್.ಡಿ ಕುಮಾರ ಸ್ವಾಮಿ 
ರಾಜ್ಯ

ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಶುರುವಾಗಲಿದೆ: ಸಿಎಂ ಟ್ವೀಟ್

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ..

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಳಿದ್ದಾರೆ.
ಈ ಸಂಬಂಧ ಅಧಿಕೃತವಾಗಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು,​ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಲಿದೆ. ಸದ್ಯದಲ್ಲೇ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಜೊತೆ ವಿಶೇಷ ಸಭೆ ನಡೆಸಿ ನಂತರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ. ​
ರಾಜ್ಯದ ವಿವಿಧ ಇಲಾಖೆಗಳ ಖಾಲಿ ಇರುವ ಸುಮಾರು 2,52,625 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಸದನದಲ್ಲಿ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಕೂಡ, ಸದ್ಯದಲ್ಲಿಯೇ 30,152 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT