ತಲಕಾವೇರಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ದಂಪತಿ 
ರಾಜ್ಯ

ದೇವರೇ ನನ್ನ ಅಧಿಕಾರ ಕಾಪಾಡುತ್ತಾನೆ: ತಲಕಾವೇರಿಯಲ್ಲಿ ಸಿಎಂ ಕುಮಾರಸ್ವಾಮಿ

ಕೊಡಗು ಜಿಲ್ಲೆಯ ಜೀವನದಿ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ...

ತಲಕಾವೇರಿ(ಕೊಡಗು): ಕೊಡಗು ಜಿಲ್ಲೆಯ ಜೀವನದಿ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ.

ತಲಕಾವೇರಿಗೆ ಮುಖ್ಯಮಂತ್ರಿ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇಲ್ಲಿ ಮೊದಲಿನಿಂದಲೂ ಇತ್ತು. ಈ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ನಾನು ಇಂತಹ ಮೂಢನಂಬಿಕೆಗಳನ್ನು ನಂಬುವುದಿಲ್ಲ. ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ ಎಂದರು.

ಭಾಗಮಂಡಲ, ತ್ರಿವೇಣಿ ಸಂಗಮಕ್ಕೆ ಆಗಮಿಸಿ ಭಂಗಂಡೇಶ್ವರ ದೇವರಿಗೆ ಸೇವೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡರು.

ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವರಾದ ಡಿ ಕೆ ಶಿವಕುಮಾರ್, ಸಾ.ರಾ. ಮಹೇಶ್ ಕೂಡ ಇದ್ದರು. ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ನಾಲ್ಕು ಜಲಾಶಯಗಳು ಭರ್ತಿಯಾಗಿದ್ದು ಬಾಗಿನ ಸಲ್ಲಿಸಲು ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿದರು.

ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿದ್ದಂತೆ ತಲಕಾವೇರಿಗೆ ಭೇಟಿ ನೀಡಿದರೆ ಕೂಡ ಮುಖ್ಯಮಂತ್ರಿಗಳು ಶೀಘ್ರವೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಹಿಂದಿನಿಂದಲೂ ಇದೆ.

ಈ ಹಿಂದೆ ತಲಕಾವೇರಿಗೆ ಭೇಟಿ ನೀಡಿದ್ದ ಜೆ ಎಚ್ ಪಟೇಲ್ ಅಧಿಕಾರ ಕಳೆದುಕೊಂಡಿದ್ದರು. ಅದಾದ ಬಳಿಕ 19 ವರ್ಷಗಳ ಕಾಲ ಯಾವೊಬ್ಬ ಮುಖ್ಯಮಂತ್ರಿಯೂ ಅಧಿಕಾರದಲ್ಲಿರುವಾಗ ತಲಕಾವೇರಿಗೆ ಹೋಗಿರಲಿಲ್ಲ.

ಈ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ . ಧರ್ಮ ಮತ್ತು ಸುಭಿಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ. ದುಃಖ ಹಾಗೂ ದಾರಿದ್ರ್ಯ ದೂರ ಮಾಡುವ ಶಕ್ತಿ ನೀಡುವಂತೆ ಚಾಮುಂಡಿ ಬಳಿ ಪ್ರಾರ್ಥನೆ ಮಾಡಲು ಮೈಸೂರಿಗೆ ಹೋಗುತ್ತಿದ್ದೇವೆ. ಹಾರಂಗಿ, ಕಬಿನಿ, ಕೆಆರ್ ಎಸ್ ಮೊದಲಾದ ಜಲಾಶಯಗಳ ಪೂಜೆ ಮಾಡುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ