ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ, ಟೆಕ್ಕಿ ಬಂಧನ

ಕಾಡುಗೋಡಿ ಬಳಿಯ ಬೆಳತೂರುವಿನ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ್ದ 14 ವರ್ಷದ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಪ್ಟ್ ವೇರ್ ಎಂಜಿನಿಯರ್ ಒಬ್ಬರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕಾಡುಗೋಡಿ ಬಳಿಯ ಬೆಳತೂರುವಿನ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ್ದ 14 ವರ್ಷದ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಪ್ಟ್ ವೇರ್ ಎಂಜಿನಿಯರ್ ಒಬ್ಬರನ್ನು ಬಂಧಿಸಿದ್ದಾರೆ.

ಮೃತ ಬಾಲಕಿ ಮಾನಸ  ಬಿಹಾರದ ಗೊಪಾಲ್ ಗಂಜ್ ಜಿಲ್ಲೆಯವಳ್ಳಾಗಿದ್ದು, ಬೆಂಗಳೂರಿಗೆ ಕರೆತಂದು ಶಿಶು ಪೋಷಣೆಯ ಕೆಲಸಕ್ಕೆ ನಿಯೋಜಿಸಲಾಗಿತ್ತು. ಜುಲೈ 12 ರಂದು ಬಂಧಿತ ಟೆಕ್ಕಿ ಕೃಷ್ಣಕಾಂತ್ ಸಿಂಗ್  ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ  ಆತನ ಹೆಂಡತಿ, ಮಾನಸ ಹಾಗೂ ಆರು ತಿಂಗಳ ಮಗು ಮನೆಯಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10-30 ರ ಸಂದರ್ಭದಲ್ಲಿ ಸಿಂಗ್ ಹೆಂಡತಿ ಅಪಾರ್ಟ್ ಮೆಂಟ್ ನಿಂದ ಹೊರಗೆ ಬಂದಿದ್ದು, ಬಾತ್ ರೂಂ ಬಾಗಿಲು ಹಾಕಿದ್ದು, ಅದನ್ನು ಹೊಡೆಯುವಂತೆ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆ. ಆಗ ಭದ್ರತಾ ಸಿಬ್ಬಂದಿ ಬಿಜಯ್ ಕುಮಾರ್ ಮಹಾಕುಳ್ ಹೋಗಿ ಬಾಗಿಲು ಹೊಡೆದಾಗ ಬಾಲಕಿ ತನ್ನ ವೇಲ್ ನಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಬಂದಿತ್ತು.
ನಂತರ ಚಾಕುವಿನಿಂದ ವೇಲ್ ಕತ್ತರಿಸಿ ಮಾನಸಳನ್ನು ಕೆಳಗೆ ಇಳಿಸಲಾಗಿತ್ತು .ನಂತರ ಮಹಾಕುಳ್ ಪೊಲೀಸರಿಗೆ ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ