ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಯುವತಿ ಫೋಟೋ ಕ್ಲಿಕ್ಕಿಸಿದ ಭದ್ರತಾ ಸಿಬ್ಬಂದಿಗೆ ಸಾರ್ವಜನಿಕರಿಂದ ಧರ್ಮದೇಟು!

ನಮ್ಮ ಮೆಟ್ರೋದಲ್ಲಿ ಯುವತಿಯ ಫೋಟೋ ತೆಗೆದ ಭದ್ರತಾ ಸಿಬ್ಬಂದಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು; ನಮ್ಮ ಮೆಟ್ರೋದಲ್ಲಿ ಯುವತಿಯ ಫೋಟೋ ತೆಗೆದ ಭದ್ರತಾ ಸಿಬ್ಬಂದಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 
ನಾಗಸಂದ್ರದ ರಾಮಚಂದ್ರ (35) ಬಂಧಿತ ವ್ಯಕ್ತಿಯಾಗಿದ್ದಾನೆ. ಜು.17ರಂದು ಸಂಜೆ 6 ಗಂಟೆ ಸುಮಾರಿಗೆ ಹೆಸರುಘಟ್ಟದ 24 ವರ್ಷದ ಯುವತಿ ನಾಗಸಂದ್ರದಿಂದ ಮೆಜೆಸ್ಟಿಕ್ ಕಡೆ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದರು. 
ಮೆಟ್ರೋದಲ್ಲಿ ಗಾಂಧಿನಗರದ ಮಳಿಗೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಆರೋಪಿ ಕೂಡ ಪ್ರಯಾಣಿಸುತ್ತಿದ್ದ. 
ಈ ವೇಳೆ ತನ್ನ ಎದುರು ಕುಳಿತಿದ್ದ ಯುವತಿಯ ಫೋಟೋವನ್ನು ಆಕೆಗೆ ತಿಳಿಯದಂತೆ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ. ಈ ವೇಳೆ ಮೊಬೈಲ್ ನ ಫ್ಲ್ಯಾಶ್ ಲೈಟ್ ಕಂಡು ಬಂದಿದೆ. ಇದರಿಂದ ಅನುಮಾನಗೊಂಡ ಯುವತಿ ಕೂಡಲೇ ಭದ್ರತಾ ಸಿಬ್ಬಂದಿಯಿಂದ ಮೊಬೈಲ್ ಕಸಿದುಕೊಂಡು ಪರಿಶೀಲಿಸಿದಾಗ ತನ್ನ ಫೋಟೋ ತೆಗೆದಿರುವುದು ತಿಳಿದುಬಂದಿದೆ. 
ನಂತರ ಮೆಟ್ರೋ ಸಿಬ್ಬಂದಿಗೆ ಮಾಹಿತಿ ನೀಡಿ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾಳೆ. ಸ್ಥಳದಲ್ಲಿದ್ದ ಸಾರ್ವಜನಿಕರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ