ಬೆಂಗಳೂರು: ಕಾರು-ಬಸ್ ಡಿಕ್ಕಿ, ಇಬ್ಬರು ಸಜೀವ ದಹನ 
ರಾಜ್ಯ

ಬೆಂಗಳೂರು: ಕಾರು-ಬಸ್ ಡಿಕ್ಕಿ, ಇಬ್ಬರು ಸಜೀವ ದಹನ

ಭಾನುವಾರ ಬೆಳಗಿನ ಜಾವ ಕಾರು-ಬಸ್ ನಡುವೆ ಡಿಕ್ಕಿ ಸಂಭವಿಸಿ ಉಂಟಾದ ಭೀಕರ ಅಪಘಾತಕ್ಕೆ ಇಬ್ಬರು ಸಜೀವ ದಹನವಾದ ಘಟನೆ ಬೆಂಗಳೂರಿನ ಚಂದಾಪುರ ಸಮೀಪ ನಡೆದಿದೆ.

ಬೆಂಗಳೂರು: ಭಾನುವಾರ ಬೆಳಗಿನ ಜಾವ ಕಾರು-ಬಸ್ ನಡುವೆ ಡಿಕ್ಕಿ ಸಂಭವಿಸಿ ಉಂಟಾದ ಭೀಕರ ಅಪಘಾತಕ್ಕೆ ಇಬ್ಬರು ಸಜೀವ ದಹನವಾದ ಘಟನೆ ಬೆಂಗಳೂರಿನ ಚಂದಾಪುರ ಸಮೀಪ ನಡೆದಿದೆ.
ಹೊಸೂರು ಮುಖ್ಯ ರಸ್ತೆಯ ಚಂದಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ಎದುರಿನಿಂದ ಬರುತ್ತಿದ್ದ ಕಾರಿಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಕಾರನ್ನು ಸಂಪೂರ್ಣ ಆವರಿಸಿದ ಬೆಂಕಿ ಕಾರಿನಲ್ಲಿದ್ದ ಇಬ್ಬರ ಸಜೀವ ದಹನಕ್ಕೆ ಕಾರಣವಾಗಿದೆ.
ಇತ್ತ ಬಸ್ಸಿಗೆ ಸಹ ಬೆಂಕಿ ಹತ್ತಿಕೊಂಡಿದ್ದು ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ತಕ್ಷಣ ಬಸ್ಸಿನಿಂದ ಹೊರಬಂದಿದ್ದು ಯಾವ ಪ್ರಾಣಾಪಾಯಗಳಾಗದೆ ಪಾರಾಗಿದ್ದಾರೆ.
ಘಟನೆಗೆ ಕಾರಣನಾದ ಬಸ್ ಚಾಲಕ ಪರಾರಿಯಾಗಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಸ್ಥಳಕ್ಕೆ ಸೂರ್ಯ ಸಿಟಿ ಪೋಲೀಸರು ಭೇಟಿ ಕೊಟ್ಟಿದ್ದಾರೆ. ಖಾರು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಬೆಂಕಿಗಾಹುತಿಯಾದವರ ಗುರುತು ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್