ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರತಿ ತಿಂಗಳ 7ನೇ ತಾರೀಖು ಪೌರ ಕಾರ್ಮಿಕರಿಗೆ ವೇತನ ನೀಡಲು ಮೇಯರ್ ಆಗ್ರಹ

ಪೌರಕಾರ್ಮಿಕರಿಗೆ ಪ್ರತಿ ತಿಂಗಳು 7ನೇ ತಾರೀಖಿನಂದು ವೇತನ ನೀಡಬೇಕೆಂದು ಮತ್ತು ಎರಡು ...

ಬೆಂಗಳೂರು: ಪೌರಕಾರ್ಮಿಕರಿಗೆ ಪ್ರತಿ ತಿಂಗಳು 7ನೇ ತಾರೀಖಿನಂದು ವೇತನ ನೀಡಬೇಕೆಂದು ಮತ್ತು ಇನ್ನು ಎರಡು ಮೂರು ದಿನಗಳೊಳಗೆ ಜೂನ್ ತಿಂಗಳವರೆಗಿನ ಪೌರ ಕಾರ್ಮಿಕರ ಎಲ್ಲಾ ಬಾಕಿ ವೇತನವನ್ನು ಪಾವತಿ ಮಾಡಬೇಕೆಂದು ಮೇಯರ್ ಸಂಪತ್ ರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ದಕ್ಷಿಣ ವಲಯದ ಅಧಿಕಾರಿಗಳೊಂದಿಗೆ ನಿನ್ನೆ ಸಭೆ ನಡೆಸಿದ ಅವರು, ಪೌರಕಾರ್ಮಿಕರಿಗೆ ಪ್ರತಿ ತಿಂಗಳು 7ನೇ ತಾರೀಖಿನಂದು ವೇತನ ಪಾವತಿ ಮಾಡಬೇಕು ಅಲ್ಲದೆ ಜೂನ್ ತಿಂಗಳವರೆಗಿನ ಬಾಕಿ ವೇತನವನ್ನು ಪಾವತಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಯಾವ ವಲಯದಲ್ಲಿ ಅಧಿಕ ಕಾರ್ಮಿಕರಿರುತ್ತಾರೆಯೋ ಅವರನ್ನು ಬೇರೆ ವಲಯಗಳಿಗೆ ವರ್ಗಾವಣೆ ಮಾಡಬೇಕೆಂದು ಸಂಪತ್ ರಾಜ್ ಆದೇಶ ಹೊರಡಿಸಿದ್ದಾರೆ. 60 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಕಾರ್ಮಿಕರಿಗೆ ಕರ್ತವ್ಯದಿಂದ ಮುಕ್ತಿ ನೀಡಬೇಕೆಂದು ಮತ್ತು ಹೆಚ್ಚು ಸಂಖ್ಯೆಯ ಕಾರ್ಮಿಕರಿದ್ದರೆ ಅವರನ್ನು ಬೇರೆ ವಲಯಗಳಿಗೆ ವರ್ಗಾಯಿಸಬೇಕೆಂದು ಸಭೆಯಲ್ಲಿ ಮೇಯರ್ ಆದೇಶ ಹೊರಡಿಸಿದ್ದಾರೆ ಎಂದು ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತ ಎನ್ ಸಿ ಜಗದೀಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT