ತೈವಾನ್ ಸಂಸ್ಥೆ ಅಧಿಕಾರಿಗಳೊಡನೆ ಮುಖ್ಯಮಂತ್ರಿ ಹಾಗೂ ಸಚಿವರ ಚರ್ಚೆ 
ರಾಜ್ಯ

ಕೋಲಾರ ಬಳಿ ದೇಶದಲ್ಲೇ ದೊಡ್ಡ ಆ್ಯಪಲ್ ಉತ್ಪನ್ನ ತಯಾರಿಕಾ ಘಟಕ ಸ್ಥಾಪನೆಗೆ ಯೋಜನೆ ಸಿದ್ದ

ತೈವಾನ್ ಮೂಲದ ಮೆ: ವಿಸ್ಟ್ರನ್ ಟೆಕ್ನಾಲಜೀಸ್ ಸಂಸ್ಥೆಯು 3000 ಕೋಟಿ ರೂ.ಗಳ ಹೂಡಿಕೆಯೊಂದಿಗೆ ಕರ್ನಾಟಕದಲ್ಲಿ ಆ್ಯಪಲ್ ಉತ್ಪನ್ನಗಳನ್ನು ತಯಾರಿಸಲು ಯೋಜಿಸಿದೆ.

ಬೆಂಗಳೂರು: ತೈವಾನ್ ಮೂಲದ  ಮೆ: ವಿಸ್ಟ್ರನ್ ಟೆಕ್ನಾಲಜೀಸ್ ಸಂಸ್ಥೆಯು 3000 ಕೋಟಿ ರೂ.ಗಳ ಹೂಡಿಕೆಯೊಂದಿಗೆ  ಕರ್ನಾಟಕದಲ್ಲಿ ಆ್ಯಪಲ್ ಉತ್ಪನ್ನಗಳನ್ನು ತಯಾರಿಸಲು ಯೋಜಿಸಿದೆ. ದೇಶದಲ್ಲಿಯೇ ಅತಿದೊಡ್ಡ ಆ್ಯಪಲ್ ಉತ್ಪನ್ನ ತಯಾರಿಕಾ ಘಟಕವನ್ನು ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ತೆರೆಯಲು ನಿರ್ಧರಿಸಲಾಗಿದೆ.
ಮಂಗಳವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸ್ಥೆಯ ಅಧಿಕಾರಿಗಳು ಕೋಲಾರ ಜಿಲ್ಲೆ ಕೈಗಾರಿಕಾ ಪ್ರದೇಶದಲ್ಲಿ ಭೂಮಿ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದಾರೆ. 
ಸಂಸ್ಥೆಯ ಈ ನಿರ್ಧಾರವನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಯೋಜನೆಗೆ ಅಗತ್ಯವಾಗಿರುವ ಸ್ಥಳದ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಇದಾಗಲೇ ಬೆಂಗಳೂರಿನ ಪೀಣ್ಯದಲ್ಲಿ ಐಫೋನ್ ಎಸ್ ಇ, ಐಫೋನ್ 6S ತಯಾರಿಕಾ ಘಟಕ ಹೊಂದಿರುವ ಸಂಸ್ಥೆ ಇದೀಗ ಘಟಕದ ವಿಸ್ತರಣೆಗಾಗಿ ಎದುರು ನೋಡುತ್ತಿದೆ. ನರಸಪುರದಲ್ಲಿ ಪ್ರಾರಂಭವಾಗಲಿರುವ ಘಟಕದಲ್ಲಿ ಎಲ್ಲಾ ಬಗೆಯ ಆ್ಯಪಲ್ ಉತ್ಪನ್ನಗಳ ತಯಾರಿಕೆ ಪ್ರಾರಂಭಿಸಲಾಗುವುದು ಎಂದು ಸಂಸ್ಥೆ ಹೇಳಿದೆ.
ಸುಮಾರು 43 ಎಕರೆ ಪ್ರದೇಶದಲ್ಲಿ ಐಫೋನ್ ತಯಾರಿಕಾ ಘಟಕವನ್ನು ಸ್ಥಾಪಿಸಲಾಗುತ್ತದೆ, ಇದು ದೇಶದಲ್ಲಿಯೇ ಅತಿ ದೊಡ್ಡ ಯೋಜನೆಯಾಗಿದೆ. ಇದರಿಂದಾಗಿ  10,500 ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.
ಮೊಬೈಲ್ ಫೋನ್ ಗಳ ದುರಸ್ತಿ ಮತ್ತು ನವೀಕರಣ ತಂತ್ರಜ್ಞಾನಕ್ಕೆ ಹೆಚ್ಚಿನ ಬೇಡಿಕೆ ಇದ್ದು ಈ ಸೌಲಭ್ಯ ಸ್ಥಾಪನೆಗಾಗಿ ಮುಖ್ಯಮಂತ್ರಿಗಳು ಸಂಸ್ಥೆಗೆ ಸಲಹೆ ನೀಡಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಒದಗಿಸುವುದಾಗಿ ಸಂಸ್ಥೆ ಭರವಸೆ ನಿಡಿದೆ.ಏಳು ದಿನಗಳಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!