ಭೀಕರ ಅಪಘಾತ, ಕಟೀಲು ಅರ್ಚಕರ ಪುತ್ರ ಸೇರಿ ಇಬ್ಬರು ವಿದ್ಯಾರ್ಥಿಗಳ ಸಾವು 
ರಾಜ್ಯ

ಬೆಂಗಳೂರು: ಭೀಕರ ಅಪಘಾತ, ಕಟೀಲು ಅರ್ಚಕರ ಪುತ್ರ ಸೇರಿ ಇಬ್ಬರು ವಿದ್ಯಾರ್ಥಿಗಳ ಸಾವು

ಮಂಗಳವಾರ ತಡರಾತ್ರಿ ಕೆಎಸ್​ಆರ್​ಟಿಸಿ ಬಸ್​, ಕ್ಯಾಂಟರ್​ ನಡುವೆ ಕಾರೊಂದು ಸಿಲುಕಿದ್ದು ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ತುಮಕೂರು ....

ಬೆಂಗಳೂರು: ಮಂಗಳವಾರ ತಡರಾತ್ರಿ ಕೆಎಸ್​ಆರ್​ಟಿಸಿ ಬಸ್​, ಕ್ಯಾಂಟರ್​ ನಡುವೆ ಕಾರೊಂದು ಸಿಲುಕಿದ್ದು ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಕಟೀಲು ದುರ್ಗಾಪರಮೇಶ್ವರಿ ದೇವಾಲಯಣ ಅನುವಂಶಿಕ ಅರ್ಚಕರಾದ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಶ್ರೀನಿಧಿ ಅಸ್ರಣ್ಣ(21) ಹಾಗೂ ತುಮಕೂರಿನ  ಪ್ರಜ್ವಲ್​ (20), ಎಂದು ಗುರುತಿಸಲಾಗಿದೆ.
ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಇವರು ತಮ್ಮ ಇನ್ನಿಬ್ಬರು ಸ್ನೇಹಿತರೊಡನೆ ಪ್ರಾಜಕ್ಟ್ ವಿಚಾರವಾಗಿ ಬೆಂಗಳೂರಿಗೆ ಆಗಮಿಸಿದ್ದರು. 
ತುಮಕೂರು ರಸ್ತೆ ಟಿ.ಬೇಗೂರು ಸಮೀಪ ತಾಳೆಕೆರೆ ಕ್ರಾಸ್​ಬಳಿ ಕೆಎಸ್​ಆರ್​ಟಿಸಿ ಬಸ್​ ಹಾಗೂ ಕ್ಯಾಂಟರ್ ನಡುವೆ ಈ ವಿದ್ಯಾರ್ಥಿಗಳಿದ್ದ ಕಾರು ಸಿಕ್ಕಿಹಾಕಿಕೊಂಡಿದೆ. ಕಾರಿನಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿಗಳಾದ ಮೂಡಬಿದಿರೆಯ ಶರತ್ ಬಂಡಾರಿ ಮತ್ತು ಕಟೀಲಿನ ಶರತ್ ರಾಮ್ ದಾಸ್​ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿದ್ಯಾರ್ಥಿಗಳು ಬೆಂಗಳೂರು ಕೆಂಗೇರಿಯ ಆರ್​ಎನ್​ಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದುಬಂದಿದೆ.
ಸ್ನೇಹಿತನನ್ನು ಮನೆಗೆ ಬಿಡಲೆಂದು  ಕಾರಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಮೊದಲು ಕ್ಯಾಂಟರ್ ಗೆ ಗುದ್ದಿ ಬಳಿಕ ಬಸ್ ಗೆ ಡಿಕ್ಕಿಯಾಗಿದೆ, ಈ ನಡುವೆ ಬಸ್ ಹಾಗೂ ಕ್ಯಾಂಟರ್ ಮುಖಾಮುಖಿಯಾಗಿದ್ದು ಕಾರು ಅವುಗಳ ನಡುವೆ ಸಿಕ್ಕು ನುಜ್ಜುಗುಜ್ಜಾಗಿದೆ.. 
ಅಪಘಾತಕ್ಕೀಡಾದ ಬಸ್ ನರಗುಂದ ಡಿಪೋಗೆ ಸೇರಿದ್ದು ಬೆಂಗಳೂರಿಗೆ ಆಗಮಿಸುತ್ತಿತ್ತು.
ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT