ಸಾಂದರ್ಭಿಕ ಚಿತ್ರ 
ರಾಜ್ಯ

ಉತ್ತಮ ಮಳೆ, ಪ್ರವಾಹ ಹೊರತಾಗಿಯೂ ಉತ್ತರ ಕರ್ನಾಟಕದಲ್ಲಿ ಜಲಕ್ಷಾಮದ ಭೀತಿ

ಜಲಾನಯನ ಪ್ರದೇಶಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ಕೂಡ ರಾಜ್ಯದ 30 ಜಿಲ್ಲೆಗಳ ಪೈಕಿ ...

ಬೆಂಗಳೂರು: ಜಲಾನಯನ ಪ್ರದೇಶಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದ್ದರೂ ಕೂಡ ರಾಜ್ಯದ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ತುಂತುರು ಮಳೆಯಿಂದಾಗಿ ಬರಗಾಲ ಉಂಟಾಗುವ ಸಾಧ್ಯತೆಯಿದೆ. ಇನ್ನೊಂದು ವಾರ ತುಂತುರು ಮಳೆ ಬೀಳುವ ಸಾಧ್ಯತೆಯಿರುವುದರಿಂದ ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದ ರೈತ ಸಮುದಾಯದಲ್ಲಿ ಆತಂಕ ಮನೆಮಾಡಿದೆ. ಜಲಕ್ಷಾಮ ಉಂಟಾಗಿ ಇದು ಖಾರಿಫ್ ಬೆಳೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ನದಿ ಮತ್ತು ಜಲಾನಯನ ತೀರ ಪ್ರದೇಶಗಳ ಕೃಷಿ ಭೂಮಿ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದೆ. ರಾಜ್ಯದಲ್ಲಿ ಜಲಾನಯನ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಶೇಕಡಾ 75 ಭಾಗವನ್ನು ಒಳಗೊಂಡಿದೆ. ಹಿಮಾಲಯ ಪ್ರದೇಶಗಳಲ್ಲಿ ಮಾನ್ಸೂನ್ ಪ್ರಬಲಗೊಂಡಿದ್ದರಿಂದ ಇದುವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು.

ಮುಂಗಾರು ಮಳೆ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರದ ನಿರ್ದೇಶಕ ಜಿ ಎಸ್ ಶ್ರೀನಿವಾಸ್ ರೆಡ್ಡಿ, ರಾಜ್ಯದ ಬಹುತೇಕ ಅಣೆಕಟ್ಟುಗಳು ತುಂಬಿರುವುದರಿಂದ ಬರಗಾಲ ಪರಿಸ್ಥಿತಿ ಉಂಟಾಗುವುದಿಲ್ಲ. ಆದರೆ ತುಂತುರು ಮಳೆ ಮತ್ತು ಮಳೆಯು ಸಮಾನವಾಗಿ ಎಲ್ಲಾ ಜಿಲ್ಲೆಗಳಿಗೆ ವ್ಯಾಪಿಸದಿದ್ದರೆ ಇದರಿಂದ ಕೃಷಿ ಚಟುವಟಿಕೆಗಳಿಗೆ ಬರಗಾಲ ಉಂಟಾಗುವ ಸಾಧ್ಯತೆಯಿದೆ ಎಂದರು.

ಮಣ್ಣಿನ ತೇವಾಂಶ ಮಟ್ಟ ಕೂಡ ಕುಸಿದಿರುವುದು ಕೃಷಿಯಲ್ಲಿ ಬರಗಾಲ ತಲೆದೋರುವುದರ ಮತ್ತೊಂದು ಅಂಶವಾಗಿದೆ.

ಮಲೆನಾಡು ಪ್ರದೇಶಗಳು ಮತ್ತು ನದಿಗಳಿರುವ ಸುತ್ತಮುತ್ತಲ ಪ್ರದೇಶಗಳಲ್ಲಿ ಮಣ್ಣಿನಲ್ಲಿ ತೇವಾಂಶ ಮಟ್ಟ ಕಡಿಮೆಯಾಗಿದೆ. ಜೂನ್ ತಿಂಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳು ಉತ್ತಮ ಮಳೆ ಕಂಡಿದ್ದರೂ ಸಹ 16 ಜಿಲ್ಲೆಗಳಲ್ಲಿ ಜುಲೈ ತಿಂಗಳಲ್ಲಿ ಮಳೆ ಕೊರತೆಯುಂಟಾಗಿದೆ. 10 ಜಿಲ್ಲೆಗಳು ಉತ್ತರ ಕರ್ನಾಟಕ ಭಾಗದಲ್ಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಮಳೆಯ ಕೊರತೆಯುಂಟಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಅಪರ ನಿರ್ದೇಶಕ ಸಿ ಎಸ್ ಪಾಟೀಲ್, ರಾಜ್ಯದ ಪಶ್ಚಿಮ ಭಾಗದಲ್ಲಿ ಮಾತ್ರ ಸಾಕಷ್ಟು ಮಳೆಯಾಗಿದೆ. ಪೂರ್ವ ವಲಯದಲ್ಲಿ ಸಾಕಷ್ಟು ಮಳೆಯಾಗಿಲ್ಲ. ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ಇತರ ಭಾಗಗಳಲ್ಲಿ ಕೃಷಿ ಭೂಮಿಗಳಲ್ಲಿ ಬರಗಾಲ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT