ಅಜಿತ್ ನಾಯ್ಕ್ 
ರಾಜ್ಯ

ಕಾರವಾರ: ದಾಂಡೇಲಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷನ ಭೀಕರ ಹತ್ಯೆ

ದಾಂಡೇಲಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ, ಹಿರಿಯ ವಕೀಲ ಅಜಿತ್ ನಾಯ್ಕ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಕಾರವಾರ: ದಾಂಡೇಲಿ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ, ಹಿರಿಯ ವಕೀಲ ಅಜಿತ್ ನಾಯ್ಕ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಶುಕ್ರವಾರ ತಡರಾತ್ರಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿ ಬಸ್ ನಿಲ್ದಾಣದ ಸಮೀಪದಲ್ಲಿ ವಕೀಲ ಅಜಿತ್ ನಾಯ್ಕ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ.
ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ್ದ ಅಜಿತ್ ದಾಂಡೇಲಿ ತಾಲೂಕು ಹೋರಾಟದಲ್ಲಿ ಸಕ್ರಿಯರಾಇದ್ದರು.ಅವರನ್ನು ಹೋರಾಟ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ರಾಜಕೀಯದಲ್ಲಿಯೂ ಗುರುತಿಸಿಕೊಂಡಿದ್ದ ಇವರು ದಾಂಡೇಲಿ ನಗಸಭಾ ಅಧ್ಯಕ್ಷ, ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. 2008ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದು ಪರಾಜಿತರಾಗಿದ್ದರು. ಮಾರ್ಗರೇಟ್ ಆಳ್ವ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಗರಡಿಯಲ್ಲಿ ಪಳಗಿದ್ದ ಇವರು ಹಲವು ವರ್ಷಗಳ ಕಾಲ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜೆಡಿಎಸ್,ಕಾಂಗ್ರೆಸ್ ಪಕ್ಷಗಳೊಡನೆ ಗುರುತಿಸಿಕೊಂಡಿದ್ದ ಇವರು ಈ ಬಾರಿ ಸಚಿವ ಆರ್.ವಿ. ದೇಶಪಾಂಡೆ ಅವರಿಗೆ ಬೆಂಬಲ ಸೂಚಿಸಿದ್ದರು.
ದಾಂಡೇಲಿ ತಾಲೂಕು ರಚನೆಯಾಗಬೇಕೆನ್ನುವುದು ಅಜಿತ್ ಅವರ ಕನಸಾಗಿತ್ತು. ಇದಕಾಗಿ ಅವರು ಸತತ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದು ಹಲವು ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಧ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಭೇತಿ ನೀಡಿದ್ದು ಆರೊಪಿ ಪತ್ತೆಗೆ ಸಕಲ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. 
ಘಟನೆ ಸಂಬಂಧ ದಾಂಡೇಲಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!