ರಾಜ್ಯ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 150ಕ್ಕೂ ಅಧಿಕ ವೈದ್ಯಕೀಯ ಸೀಟುಗಳು ಸರ್ಕಾರಕ್ಕೆ ಲಭ್ಯ

Sumana Upadhyaya

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಕೌನ್ಸೆಲಿಂಗ್ ನಲ್ಲಿ ರಾಜ್ಯದಲ್ಲಿ 150 ಹೆಚ್ಚು ವೈದ್ಯಕೀಯ ಸೀಟುಗಳು ಲಭ್ಯವಾಗಿದೆ.ರಾಜ್ಯ ಹೈಕೋರ್ಟ್ ನೀಡಿರುವ ಆದೇಶದ ಪ್ರಕಾರ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಇಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಎಂದು ವೈದ್ಯಕೀಯ ವಿಜ್ಞಾನಕ್ಕೆ ಪ್ರವೇಶವಕಾಶ ನಿರಾಕರಿಸಲಾಗಿತ್ತು.

ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ ನಿರ್ಧಾರವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೊರೆ ಹೋಗಿತ್ತು. ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಾತಿಗೆ ಅನುಮತಿ ನೀಡಿದೆ. ಈ ಸೀಟುಗಳನ್ನು ಎರಡನೇ ಸುತ್ತಿನ ಕೌನ್ಸೆಲಿಂಗ್ ನಲ್ಲಿ ಹಂಚಲಾಗುತ್ತಿದ್ದು ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT