ರಾಜ್ಯ

ಪ್ರತ್ಯೇಕ ರಾಜ್ಯ ಕುರಿತು ಸಿಎಂ ಬಳಿ ಮಾತುಕತೆ ನಡೆಸಿ; ಬಂಡೆಪ್ಪ ಕಾಶೆಂಪುರ್

Manjula VN
ಬೆಂಗಳೂರು: ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕದ ನಾಯಕರು ದನಿ ಎತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಬಳಿ ಮಾತುಕತೆ ನಡೆಸಬೇಕು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಶನಿವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಪ್ರತ್ಯೇಕ ರಾಜ್ಯ ಕೂಗು ಕುರಿತು ಚರ್ಚೆ ನಡೆಸಲು ಸಿದ್ಧರಾಗಿದ್ದಾರೆ. ಪ್ರತ್ಯೇಕ ರಾಜ್ಯ ಕುರಿತಂತೆ ಉತ್ತರ ಕರ್ನಾಟಕ ನಾಯಕರು ದನಿ ಎತ್ತಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಿಗೆ  ಅನ್ಯಾಯವಾಗಿರುವುದೇ ಆಗಿದ್ದರೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಬೇಕು ಎಂದು ಹೇಳಿದ್ದಾರೆ. 
ನಾಯಕರು ಇದ್ದಕ್ಕಿದ್ದಂತೆ ಪ್ರತ್ಯೇಕ ರಾಜ್ಯ ಕುರಿತಂತೆ ದನಿ ಎತ್ತಿ ಪ್ರತಿಭಟನೆ ನಡೆಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಬೇಕು ಎಂದ ಅವರು ಆಗಸ್ಟ್ 2 ರಂದು ಉತ್ತರ ಕರ್ನಾಟಕ ಬಂದ್'ಗೆ ಕರೆ ನೀಡಿರುವ ಕುರಿತು ಮಾತನಾಡಿ, ಅಖಂಡ ಕರ್ನಾಟಕವನ್ನು ಇಬ್ಬಾಗ ಮಾಡಲು ಸಾಧ್ಯವಿಲ್ಲ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. 
ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಪಾಟೀಲ್ ತಮಗೆ ಅನ್ಯಾಯವಾಗಿದೆ ಎಂದು ತಿಳಿದಿರಬಹುದು. ಸಚಿವ ಸಂಪುಟ ರಚನೆಗೊಂಡ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ ಎದ್ದಿದೆ ಎಂದು ತಿಳಿಸಿದ್ದಾರೆ. 
SCROLL FOR NEXT