ಧರಣಿ ನಿರತ ಮಠಾಧೀಶರೊಡನೆ ಬಿಎಸ್ ವೈ 
ರಾಜ್ಯ

ಮುಖ್ಯಮಂತ್ರಿ ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆಯೇ ಪ್ರತ್ಯೇಕತೆ ಕೂಗಿಗೆ ಕಾರಣ: ಯಡಿಯೂರಪ್ಪ

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗಾಗಿ ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಧರಣಿಯಲ್ಲಿ ನಿರತರಾಗಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಹೋರಾಟಗಾರರು ಹಾಗೂ....

ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗಾಗಿ ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಧರಣಿಯಲ್ಲಿ ನಿರತರಾಗಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿಯ ಹೋರಾಟಗಾರರು ಹಾಗೂ ಮಠಾಧೀಶರನ್ನು ರಾಜ್ಯ ವಿರೋಧ ಪಕ್ಷದ ನಾಯಕ ಬಿ.ಎಸ್ ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ಅಖಂಡವಾಗಿರಬೇಕು. ಪ್ರತ್ಯೇಕ ರಾಜ್ಯಕ್ಕಾಗಿ ಪ್ರತಿಭಟನೆ ಬೇಡ ಎಂದು  ಮನವಿ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಯಡಿಯೂರಪ್ಪ ಮುಖ್ಯಮಂತ್ರಿಗಳ ಬೇಜವಾಬ್ದಾರಿತನವೇ ಇದಕ್ಕೆಲ್ಲಾ ಕಾರಣ. ಅಂದು ಕರ್ನಾಟಕ ಏಕೀಕರಣಕ್ಕಾಗಿ ಆಲೂರು, ಫಗು ಹಳಕಟ್ಟಿ ಸೇರಿ ನಾನಾ ಮುಖಂಡರು ಹೋರಾಟ ಮಾಡಿದ್ದರು. ಆದರೆ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಠಾಧೀಶರನ್ನು ಮನವೊಲಿಸುವ ಬದಲು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು.
ಆಗಸ್ಟ್ 2ರಂದು ನಡೆಯುವ ಪ್ರತ್ಯೇಕ ರಾಜ್ಯಕ್ಕಾಗಿನ ಬಂದ್ ಗೆ ಬೆಂಬಲ ಸೂಚಿಸದಂತೆ ಮನವಿ ಮಾಡಲು ತಾನು ಇಲ್ಲಿಗೆ ಆಗಮಿಸಿದ್ದಾಗಿ ಯಡಿಯೂರಪ್ಪ ಹೇಳಿದ್ದಾರೆ.
ಶಾಸಕರಾದ ಉಮೇಶ ಕತ್ತಿ, ಅಭಯ ಪಾಟೀಲ, ಮಹಾದೇವಪ್ಪ ಯಾದವಾಡ, ಇನ್ನೂ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಸ್ವಾಮೀಜಿಗಳು ಮಾತನಾಡಿ ಹಲವು ಸಂಘಟನೆಗಳು ಈ ಪ್ರತಿಭಟನೆಗೆ ಅವಕಾಶ ನೀಡಿದ್ದರಾದರೂ ಮಠಾಧೀಶರು ತಾವು ಪ್ರತ್ಯೇಕ ರಾಜ್ಯಕ್ಕಾಗಿ ಇಲ್ಲಿ ಸೇರಿಲ್ಲ, ಬದಲಿಗೆ ಉತ್ತರ ಕರ್ನಾಟಕ ಅಭಿವ್ರುದ್ದಿಗಾಗಿ ಸೇರಿದ್ದೇವೆ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಧರಣಿಯ ನಡುವೆಯೇ ಉತ್ತರ ಕರ್ನಾಟಕ ಪ್ರತ್ಯೇಕ ಧ್ವಜ ಹಾರಿಸಲು ಮುಂದಾಗಿದ್ದ ಹೋರಾಟಗಾರರನ್ನು ಪೋಲೀಸರು ತಡೆದಿದ್ದಾರೆ, ಪ್ರತ್ಯೇಕ ಧ್ವಜವನ್ನು ವಶಕ್ಕೆ ಪಡೆದುಕೊಂಡ ಪೋಲೀಸರು ಉತ್ತರ ಕರ್ನಾಟಕ ಹೋರಾಟ ಸಮಿತಿ‌ ಮುಖಂಡ ನಾಗೇಶ್ ಗೋಲಶೆಟ್ಟಿ ಅವರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ